ಬೆಂಗಳೂರು ಗ್ರಾಮಾಂತರ

ಕನಕಪುರ: ಮತದಾನ ಜಾಗೃತಿ ಜಾಥಾ, ಮಾನವ ಸರಪಳಿ, ದೀಪ ಮೆರವಣಿಗೆ

Published On :

ಕ.ಪ್ರ. ವಾರ್ತೆ   ಕನಕಪುರ   ಏ.4
ತಾಲೂಕು ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ತಾಲೂಕು ಆಡಳಿತದ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಜಾಥಾ, ಮಾನವ ಸರಪಳಿ ಹಾಗೂ ದೀಪ ಮೆರವಣಿಗೆ ಕನಕಪುರ ಪಟ್ಟಣದಲ್ಲಿ ನಡೆಯಿತು.
ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ಅಧಿಕಾರಿಗಳು ನೌಕರರು ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಗಮನ ಸೆಳೆದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜಿ.ಜೆ. ನಾಯಕ್‌ಹಾಗೂ ಸಿಡಿಪಿಓ ಬಸವರಾಜು ನೇತೃತ್ವದಲ್ಲಿ ತಾಲೂಕು ಕಚೇರಿಯಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟು ಇಲ್ಲಿನ ಕೆಂಗಲ್ ಹನುಮಂತಯ್ಯ ವೃತ್ತದಲ್ಲಿ ಮಾನವ ಸರಪಳಿ ರಚಿಸಿದರು. ಹಚ್ಚಿದ ಕ್ಯಾಂಡಲ್‌ಗಳನ್ನು ಕೈಗಳಲ್ಲಿ ಹಿಡಿದುಕೊಂಡು ಮೆರವಣಿಗೆ ನಡೆಸಿದರು. ಜಿ.ಜೆ.ನಾಯಕ್ ಮಾತನಾಡುತ್ತಾ ಮತದಾನ ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು ಯಾವುದೇ ಕಾರಣಕ್ಕೂ ಮತದಾನದಿಂದ ಹೊರಗುಳಿಯಬಾರದು. ಜನವರಿ 1 ಕ್ಕೆ 18 ವರ್ಷ ತುಂಬಿದ ಪ್ರತಿಯೊಬ್ಬರೂ ಚುನಾವಣಾ ಶಾಖೆ ವೆಬ್‌ಸೈಟ್‌ನಲ್ಲಿ ನೋಂದಣಿಯಾಗುವ ಮೂಲಕ ಮತಪಟ್ಟಿಗೆ ಸೇರ್ಪಡೆಗೊಂಡು ಮತಚಲಾಯಿಸಬೇಕು. ಉತ್ತಮ ಜನಪ್ರತಿ ನಿಧಿಗಳನ್ನು ಆಯ್ಕೆಮಾಡುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಕಾರಣರಾಗಬೇಕು ಎಂದು ಕರೆ ನೀಡಿದರು. ಮೆರವಣಿಗೆಯಲ್ಲಿ ಆರಕ್ಷಕ ವೃತ್ತ ನಿರೀಕ್ಷಕ ಧನಂಜಯಕುಮಾರ್, ಸಮಾಜಕಲ್ಯಾಣಾಧಿಕಾರಿ ಬಾಲಚಂದ್ರ ಮೊದಲಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.