ಕಾಂಗ್ರೆಸ್ ಅಭ್ಯರ್ಥಿ ಗೆಲವಿಗೆ ಸಹಕರಿಸಿ
ಸೂಲಿಬೆಲೆ: ಹೊಸಕೋಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ವಧಿಸುತ್ತಿರುವ ಎನ್. ನಾಗರಾಜ್ ಅವರ ಗೆಲವಿಗೆ ಸಹಕರಿಸುವಂತೆ ಸೂಲಿಬೆಲೆ ಹೋಬಳಿಯ ಕಾಂಗ್ರೆಸ್ ಎಸ್ಟಿ ಘಟಕ ಅಧ್ಯಕ್ಷ ವೆಂಕಟೇಶ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಸೂಲಿಬೆಲೆ ಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೊಸಕೋಟೆ ಕ್ಷೇತ್ರದ ಅಭಿವೃದ್ಧಿಗೆ ತನ್ನದೇ ಆದ ಕನಸುಗಳನ್ನು ಕಂಡಿರುವ ಎನ್.ನಾಗರಾಜ್ ಅವರನ್ನು ಈ ಬಾರಿ ಗೆಲ್ಲಿಸಲು ಪ್ರತಿಯೊಬ್ಬರು ಪ್ರಯತ್ನಿಸಬೇಕು. ಕಳೆದ ಚುನಾವಣಿಯಲ್ಲಿ ಕಡಿಮೆ ಮತಗಳ ಅಂತರದಿಂದ ಸೋತ ಇವರು, ಮತದಾರರು ಈ ಬಾರಿ ಕೈ ಬಿಡುವುದಿಲ್ಲ ಎಂಬ ವಿಶ್ವಾಸವಿದೆ. ಇದಕ್ಕೆ ಪೂರಕವಾಗಿ ಕಾಯಕರ್ತರು ಕೆಲಸಮಾಡಬೇಕಿದೆ ಎಂದರು. ಗ್ರಾಪಂ ಸದಸ್ಯ ಎಸ್.ಕೆ ರಾಘವೇಂದ್ರ, ಶಫಿವುಲ್ಲಾ,ಬುಲೇಟ್ ಮುನಿರಾಜ್ ಸೇರಿದಂತೆ ಹಲವರು ಹಾಜರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

