ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್‌ನಿಂದ ಪ್ರಚಾರ ಆರಂಭ

Published On :

ಕ.ಪ್ರ. ವಾರ್ತೆ   ದೊಡ್ಡಬಳ್ಳಾಪುರ   ಏ.5
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರ ಆರಂಭಿಸಿದೆ. ಹಲವು ಅವಕಾಶಗಳನ್ನು ವ್ಯವಸ್ಥಿತವಾಗಿ ಪಕ್ಕಕ್ಕಿಟ್ಟು ಪಕ್ಷಾಂತರಿಗಳಿಗೆ ಮಣೆ ಹಾಕದೆ ಕಾಂಗ್ರೆಸ್ ಈ ಬಾರಿ ನಿಷ್ಠ ಕಾರ್ಯಕರ್ತರನ್ನು ಕಣಕ್ಕಿಳಿಸುವ ಭರವಸೆಯೊಂದಿಗೆ ಮತಬೇಟೆಗೆ ಚಾಲನೆ ನೀಡಿದೆ.
ತಾಲೂಕಿನ ಕಂಟನಕುಂಟೆ, ಪಾಲನಜೋಗಿಹಳ್ಳಿ ಮತ್ತು ಅರಳುಮಲ್ಲಿಗೆ ಗ್ರಾಮಗಳಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು ಪಕ್ಷದ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು.
ಪ್ರಚಾರ ಸಭೆಗಳಲ್ಲಿ ಮಾತನಾಡಿದ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ತಾಲೂಕಿನಲ್ಲಿ ಜೆಡಿಎಸ್ ಹಣಬಲದಿಂದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ. ಹೀಗಿರುವಾಗ ಕಾಂಗ್ರೆಸ್ ಜನಪರವಾಗಿ ಮತ್ತು ಜನಹಿತ ರಕ್ಷಣೆಯ ಭರವಸೆಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿದೆ. ಅವಕಾಶವಾದಿ ರಾಜಕಾರಣವನ್ನು ಕಡೆಗಣಿಸುವ ಸ್ಪಷ್ಟ ಅವಕಾಶ ಕಳೆದುಕೊಳ್ಳಬಾರದು.ಜನಸ್ನೇಹಿ ಆಡಳಿತಗಾರರು ಯಾರು ಎಂಬುದನ್ನು ಜನ ತೀರ್ಮಾನಿಸಬೇಕಿದೆ ಎಂದರು. ಜಿಪಂ ಮಾಜಿ ಅಧ್ಯಕ್ಷ ಸಿ.ಡಿ.ಸತ್ಯನಾರಾಯಣಗೌಡ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಅಪ್ಪಕಾರನಹಳ್ಳಿ ವೆಂಕಟೇಶ್, ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಯುವ ಮುಖಂಡ ಡಾ.ನಾರಾಯಣ್ ಮತ್ತಿತರರು ಮಾತನಾಡಿದರು.
ಕಾಂಗ್ರೆಸ್ ಸೇರ್ಪಡೆ: ಇದೇ ಸಂದರ್ಭದಲ್ಲಿ ಮುಖಂಡರಾದ ಕಂಟನಕುಂಟೆ ಪಂಚಾಯಿತಿ ವ್ಯಾಪ್ತಿಯ ನಂಜುಂಡ, ಶ್ರೀನಿವಾಸ್, ಮುನಿ ಆಂಜಿನಪ್ಪ, ಚಿದಾನಂದ ಸೇರಿದಂತೆ ಹಲವಾರು ಕಾರ್ಯಕರ್ತರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಕಾಂಗ್ರೆಸ್ ಮುಖಂಡರಾದ ಡಿ.ವಿ.ಅಶ್ವತ್ಥಪ್ಪ, ರಾಜಗೋಪಾಲ್, ಜಿಪಂ ಮಾಜಿ  ಸದಸ್ಯೆ ಜಯಲಕ್ಷ್ಮಿ, ಯುವ ಘಟಕದ ಅಧ್ಯಕ್ಷ ವೆಂಕಟೇಶ್, ರಾಜ್‌ಕುಮಾರ್, ಮಂಜುನಾಥ್  ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.