8 ರಂದು ವಿವಿಧ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ
ಕ.ಪ್ರ.ವಾರ್ತೆ ರಾಮನಗರ ಏ.5-
ರಾ-ಚ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶೇಷಾದ್ರಿ, ಕೆಎಂಎಫ್ ನಿರ್ದೇಶಕ ಪಿ.ನಾಗರಾಜು, ಜಿಪಂ ಮಾಜಿ ಸದಸ್ಯ ನಾಗರಾಜು ಸಹಿತ ವಿವಿಧ ಪಕ್ಷಗಳ ಹಲವು ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ನಗರದಲ್ಲಿ ಏ.8 ರಂದು ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಜಿಯಾವುಲ್ಲಾ ಮತ್ತು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಹೇಳಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂದು ಸಂಜೆ 4ಕ್ಕೆ ನಡೆಯುವ ಭಾರಿ ಬಹಿರಂಗ ಸಭೆಯಲ್ಲಿ ಅನ್ಯ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಸಿ.ಎಂ.ಇಬ್ರಾಹಿಂ ಮತ್ತು ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಶುಕ್ರವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್, ಮುಖಂಡರಾದ ಎಸ್.ರವಿ, ಮರಿದೇವರು, ಕೆ.ರಮೇಶ್, ನಾಗಣ್ಣ, ಕಾಂತರಾಜ್ ಪಟೇಲ್, ಜಯರಾಮಯ್ಯ, ಡಿ.ಎಂ.ಗೌಡ, ಪಕ್ಷದ ನೂತನ ನಗರಸಭೆ ಸದಸ್ಯರು, ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ಕಾಂಗ್ರೆಸ್ ಮುಖಂಡರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಸಿಪಿಐ ವಿರುದ್ಧ ದೂರು: ರಾಮನಗರ ನಗರ ವೃತ್ತದ ಪೊಲೀಸ್ ಇನ್ಸ್ಪೆಕ್ಟರ್ ಪುರುಷೋತ್ತಮ್ ಜೆಡಿಎಸ್ ಏಜೆಂಟರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರು ತಾವಾಗಿಯೇ ವರ್ಗಾವಣೆ ಮಾಡಿಸಿಕೊಂಡು ಹೊರ ಹೋಗಬೇಕು. ಇಲ್ಲವೇ ಅವರನ್ನು ನಾವೇ ಕ್ಷೇತ್ರ ಬಿಟ್ಟು ಹೊರಕ್ಕೆ ಕಳುಹಿಸುವ ಕೆಲಸ ಮಾಡುತ್ತೇವೆ ಎಂದು ಜಿಯಾವುಲ್ಲಾ ಮತ್ತು ಲಿಂಗಪ್ಪ ಎಚ್ಚರಿಕೆ ನೀಡಿದರು. ನಗರಸಭೆಯಲ್ಲಿ ಜೆಡಿಎಸ್ಗೆ ಬಹುಮತ ಕೊಡಿಸಲು ಪುರುಷೋತ್ತಮ್ ಇನ್ನಿಲ್ಲದ ಸಾಹಸ ನಡೆಸಿದ್ದು, ಫಲಿತಾಂಶದ ಬಳಿಕ ಹಲವು ಸದಸ್ಯರನ್ನು ಜೆಡಿಎಸ್ ಸೇರುವಂತೆ ಮನವೊಲಿಸಿದ್ದಾರೆ. ಈಗ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಪರವಾಗಿ ಬಿರುಸಿನ ಪ್ರಚಾರಕ್ಕೂ ಇಳಿದಿದ್ದಾರೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

