ಮಹೇಶ್ಗೆ ಮುಖ್ಯಮಂತ್ರಿ ಪದಕ
ರಾಮನಗರ: ಚನ್ನಪಟ್ಟಣದ ಪೊಲೀಸ್ ತರಬೇತಿ ಶಾಲೆಯಲ್ಲಿ ಬೋಧಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಆರ್.ಸಿ.ಮಹೇಶ್ ಅವರಿಗೆ ಮುಖ್ಯಮಂತ್ರಿ ಪದಕ ದೊರೆತಿದೆ. ರಾಮನಗರ ಟೌನ್ ನಿವಾಸಿ ಮಹೇಶ್ 1999ನೇ ಸಾಲಿನಲ್ಲಿ ಪೊಲೀಸ್ ಇಲಾಖೆಗೆ ಸೇರಿ, ತರಬೇತಿ ಅವಧಿಯಲ್ಲಿ ಉತ್ತಮ ಪ್ರಶಿಕ್ಷಣಾರ್ಥಿಯಾಗಿ ಬಹುಮಾನ ಪಡೆದಿದ್ದರು. 2002ರಲ್ಲಿ ನರಹಂತಕ ವೀರಪ್ಪ ವಿರುದ್ಧದ ಕಾರ್ಯಾಚರಣೆಯಲ್ಲೂ ಬಹುಮಾನ ಗಳಿಸಿದ್ದರು. 2005ರಲ್ಲಿ ಪೊಲೀಸ್ ತರಬೇತಿ ಶಾಲೆಗೆ ವರ್ಗಾವಣೆಗೊಂಡು ಸುಮಾರು 4 ಸಾವಿರ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಬೋಧಕನಾಗಿ ಕರ್ತವ್ಯ ನಿರ್ವಹಿಸಿ, ತಂಡಗಳ ಯಶಸ್ವಿ ನಿರ್ಗಮನಕ್ಕೆ ಕಾರಣರಾಗಿದ್ದಾರೆ. ಇವರ ಪ್ರಾಮಾಣಿಕ ಸೇವೆಯನ್ನು ಮೆಚ್ಚಿ ಶಾಲೆಯ ಪ್ರಾಂಶುಪಾಲರು ಮುಖ್ಯಮಂತ್ರಿ ಪದಕಕ್ಕೆ ನಾಮ ನಿರ್ದೇಶನ ಮಾಡಿದ್ದರು. ಇದನ್ನು ಪರಿಗಣಿಸಿದ ಪೊಲೀಸ್ ಇಲಾಖೆ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಮಾಡಿದೆ. ಕಳೆದ 50 ವರ್ಷಗಳಲ್ಲಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾದ ಚನ್ನಪಟ್ಟಣ ಪೊಲೀಸ್ ತರಬೇತಿ ಶಾಲೆಯ ಮೊದಲ ವ್ಯಕ್ತಿಯಾಗಿದ್ದಾರೆ.
ನಾಳೆ ಕಾನೂನು ಅರಿವು-ನೆರವು
ರಾಮನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಕಾನೂನು ಕಾಲೇಜು ಹಾಗೂ ಎಂ.ಎಚ್. ಕಾನೂನು ಕಾಲೇಜಿನಿಂದ ಏ.7ರ ಬೆಳಗ್ಗೆ 10ಕ್ಕೆ ಬಿಡದಿಯ ಬಾನಂದೂರು ಗ್ರಾಮದಲ್ಲಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಹೈಕೋರ್ಟ್ ನ್ಯಾಯಮೂರ್ತಿ ಹುಲುವಾಡಿ ಜಿ.ರಮೇಶ್ ಉದ್ಘಾಟಿಸುವರು, ನ್ಯಾಯಮೂರ್ತಿ ಕೆ.ಎನ್.ಕೇಶವನಾರಾಯಣ ಅಧ್ಯಕ್ಷತೆ ವಹಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ್, ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ಶಾಂತಪ್ಪ, ಉಪಾಧ್ಯಕ್ಷ ಸಿ.ಚಿಕ್ಕಪ್ಪಾಜಿ, ಕಾರ್ಯದರ್ಶಿ ಎಂ.ಜಿ.ಮಹೇಶ್, ಪ್ರಾಂಶುಪಾಲ ಎ.ಗೋಪಾಲ ಮತ್ತಿತರರು ಭಾಗವಹಿಸುವರು.
ನರಸಿಂಹಸ್ವಾಮಿ ಪ್ರಚಾರಕ್ಕೆ ಚಾಲನೆ
ದೊಡ್ಡಬಳ್ಳಾಪುರ: ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜೆ.ನರಸಿಂಹಸ್ವಾಮಿ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಚುನಾವಣಾ ಪ್ರಚಾರವನ್ನು ಶನಿವಾರ ಬೆಳಗ್ಗೆ 10.30ಕ್ಕೆ ಆರಂಭಿಸಲಿದ್ದಾರೆ. ತಾಲೂಕಿನ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಅವರು ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ನಂತರ ವಿವಿಧ ಗ್ರಾಮಗಳಿಗೆ ತೆರಳಿ ಅವರು ಮತಯಾಚಿಸಲಿದ್ದಾರೆ. ಬಿಜೆಪಿ ಮತ್ತು ನರಸಿಂಹಸ್ವಾಮಿ ಬೆಂಬಲಿತ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

