ಗ್ರಾಮೀಣ ಬದುಕು ತಿಳಿಯಲು ಎನ್ಎಸ್ಎಸ್ ಸಹಕಾರಿ
ಕ.ಪ್ರ.ವಾರ್ತೆ ದೊಡ್ಡಬಳ್ಳಾಪುರ ಏ.6
ಗ್ರಾಮೀಣ ಪ್ರದೇಶದ ಜನರ ಬದುಕಿನ ಸಂವೇದನೆಗಳನ್ನು ಅರ್ಥ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಸಹಕಾರಿಯಾಗಿವೆ ಎಂದು ಬೆಂ.ಗ್ರಾ.ಜಿಲ್ಲಾ ಡಯಟ್ನ ಉಪನಿರ್ದೇಶಕ ಎಂ.ಪಿ.ಮಾದೇಗೌಡ ಹೇಳಿದರು.
ತಾಲೂಕಿನ ಚಿಕ್ಕಬೆಳವಂಗಲ ಗ್ರಾಮದಲ್ಲಿ ಕೋಲಿಗೆರೆಯ ಸತೀಶ್ಚಂದ್ರ ಸ್ಮಾರಕ ಶಿಕ್ಷಕರ ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ಆರಂಭವಾದ ರಾಷ್ಟ್ರೀಯ ಸೇವಾ ಯೋಜನೆ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ದೇಶದ ಭವಿಷ್ಯತ್ತನ್ನು ನಿರ್ಮಾಣ ಮಾಡುವ ಹಳ್ಳಿಗರು ಯಾವ ರೀತಿಯ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ ಮತ್ತು ಸಮಕಾಲೀನ ಸವಾಲುಗಳಿಗೆ ಹೇಗೆ ಉತ್ತರಗಳನ್ನು ಕಂಡುಕೊಳ್ಳುವ ಪ್ರಯತ್ನ ಮಾಡುತ್ತಾರೆ ಎಂಬುದರ ಅರಿವು ಪ್ರತಿಯೊಬ್ಬರಿಗೂ ಮುಖ್ಯ. ಶಿಬಿರಗಳಿಂದ ನಾವು ಕಲಿಯಬೇಕಾದ್ದು ಬಹಳಷ್ಟಿರುತ್ತದೆ. ಶಿಸ್ತು-ವೈಚಾರಿಕ ಮನೋಭಾವ ಬೆಳೆಸಿಕೊಳ್ಳುವುದು ಮುಖ್ಯ. ವಿದ್ಯಾರ್ಥಿ ದೆಸೆಯಲ್ಲಿ ನಾಗರೀಕ ಶಿಸ್ತುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಲು ಗಾಂಧಿ ಚಿಂತನೆ ಮತ್ತು ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ಆಂಜನೇಯಮೂರ್ತಿ ಮಾತನಾಡಿ, ಕುಗ್ರಾಮಗಳಲ್ಲಿ ವಿದ್ಯಾರ್ಥಿಗಳು ಜೀವನಾನುಭವವನ್ನು ಪಡೆಯಬೇಕು. ಕಾಲೇಜು ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳು ಕೇವಲ ಪಠ್ಯ ಚಟುವಟಿಕೆಗಳಿಗೇ ಸೀಮಿತವಾಗದೆ ತಮ್ಮ ಆಲೋಚನೆಗಳನ್ನು ಇತರ ವಿಚಾರಗಳಿಗೂ ವಿಸ್ತರಿಸಿಕೊಳ್ಳಬೇಕು. ಈ ಹಂತದಲ್ಲಿ ಎನ್ಎಸ್ಎಸ್ ಬಹುಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂದರು.
ದೊಡ್ಡಬೆಳವಂಗಲ ಎಸೈ ಶಿವಕುಮಾರ್, ಜಯಲಕ್ಷ್ಮಿ, ರಾಮನಾಥ್, ಪ್ರಾಂಶುಪಾಲ ರಿಯಾಜುದ್ದೀನ್, ಎಂ.ಮುನಿರಾಜು, ಬಸವರಾಜು, ಅನಿಲ್ಕುಮಾರ್, ಪರಶಿವಮೂರ್ತಿ, ಲತಾದೇವಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

