ಚಿಕ್ಕಬೆಳವಂಗಲದಲ್ಲಿ ಉಪನ್ಯಾಸ ಕಾರ್ಯಕ್ರಮ
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಬೆಳವಂಗಲದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಸಾಮಾಜಿಕ ಸೇವೆಯಲ್ಲಿ ಯುವಜನರ ಪಾತ್ರ ಕುರಿತ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕೋಲಿಗೆರೆಯ ಸತೀಶ್ಚಂದ್ರ ಸ್ಮಾರಕ ಶಿಕ್ಷಕರ ತರಬೇತಿ ಸಂಸ್ಥೆಯ ನೇತೃತ್ವದಲ್ಲಿ ನಡೆಯುತ್ತಿರುವ 7 ದಿನಗಳ ವಿಶೇಷ ಯುವಜನ ಸೇವಾ ಶಿಬಿರದ ಅಂಗವಾಗಿ ಈ ಕಾರ್ಯಕ್ರಮ ಏರ್ಪಾಟಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದ ಆಂಗ್ಲ ಭಾಷಾ ಸಹ ಪ್ರಾಧ್ಯಾಪಕ ಕೆ.ಆರ್.ರವಿಕಿರಣ್ ಮಾತನಾಡಿದರು. ಸತೀಶ್ಚಂದ್ರ ಕಾಲೇಜಿನ ಪ್ರಾಂಶುಪಾಲ ರಿಯಾಜುದ್ದೀನ್ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಯುಐಎಂ ಎನ್ಎಸ್ಎಸ್ ಅಧಿಕಾರಿ ಚಿಕ್ಕಣ್ಣ, ಕಾಲೇಜಿನ ಉಪನ್ಯಾಸಕರಾದ ಅನಿಲ್ಕುಮಾರ್, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

