ದೇವನಹಳ್ಳಿ ಬಿಇಒ ಮುನಿರಾಜು ಅಮಾನತು ಸಾಧ್ಯತೆ
ಕ.ಪ್ರ.ವಾರ್ತೆ ಬೆಂಗಳೂರು ಏ.8-
ಪರೀಕ್ಷೆ ಸಮಯದಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸುತ್ತಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಮುನಿರಾಜು ಅವರು ಸೇವೆಯಿಂದ ಅಮಾನತುಗೊಳ್ಳುವ ಸಾಧ್ಯತೆ ಇದೆ.
ಏ. 1ರಂದು ದೇವನಹಳ್ಳಿಯ ವಿಜಯಪುರ ಶಾಲೆಯಲ್ಲಿ ಪರೀಕ್ಷಾ ಮಂಡಳಿಯ ನಿಯಮ ಮೀರಿ ಅದೇ ಶಾಲಾ ಮುಖ್ಯಸ್ಥರನ್ನು ಪರೀಕ್ಷಾ ಕೇಂದ್ರಗಳಿಗೆ ನೇಮಕಮಾಡಿ ಪರೀಕ್ಷೆ ನಡೆಸಲು ಮುನಿರಾಜು ಅವರು ಸಹಾಯ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಇದನ್ನು ಪೂರ್ವ ಪರ ಪರಿಶೀಲಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕ ಎಚ್.ವಿ. ವೆಂಕಟೇಶಪ್ಪ ಹಾಗೂ ಮಂಡಳಿ ನಿರ್ದೇಶಕ ವೆಂಕಟೇಶಯ್ಯ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ವರದಿ ಸಲ್ಲಿಸಿದ್ದರು. ಈ ವರದಿ ಆಧಾರದ ಮೇಲೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮುನಿರಾಜು ಅವರನ್ನು ಅಮಾನತ್ತಿನಲ್ಲಿಟ್ಟು ವಿಚಾರಣೆ ನಡೆಸಿ ಬಳಿಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಇದೇ ರೀತಿ ಮುಂದಿನ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸುವವರಿಗೆ ಅಮಾನತು ಮಾಡಲು ಸಾಧ್ಯತೆ ಇರುತ್ತದೆ. ಹೀಗಾಗಿ ಶಿಸ್ತ ಬದ್ಧವಾಗಿ ಕಾರ್ಯನಿರ್ವಹಿಸುವಂತೆ ಮಂಡಳಿ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

