ಹೋರಾಟ ಮನೋಭಾವ ಬೆಳೆಸಿಕೊಳ್ಳಿ: ಪ್ರೊ. ಸೀಮಾ
ಕ.ಪ್ರ.ವಾರ್ತೆ ಸೂಲಿಬೆಲೆ ಏ.9
ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ ಗುರಿ ಸಾಧನೆಗೆ ಹೋರಾಟದ ಮನೋಭಾವ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳಬೇಕು ಎಂದು ಜಂಟಿ ನಿರ್ದೇಶಕರು ಹಾಗೂ ಸೂಲಿಬೆಲೆ ಪದವಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಸೀಮಾ ಹೇಳಿದರು.
ಅವರು ಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ ಮಾತನಾಡಿ, ವಿದ್ಯಾರ್ಥಿಗೆ ಮನಷ್ಯತ್ವ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಸಮಾಜವನ್ನು ಉತ್ತಮ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿ ಹಿರಿಯ ಸದಸ್ಯ ಬಿ.ಎನ್.ಗೋಪಾಲಗೌಡ ಮಾತನಾಡಿ, ಅಜ್ಞಾನದಿಂದ ಸುಜ್ಞಾನದ ಕಡೆ ಮಾರ್ಗ ತೋರಿಸುವುದೇ ವಿದ್ಯೆ. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಗ್ರಾಮೀಣ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅಗತ್ಯವಾಗಿರುವ ಶೈಕ್ಷಣಿಕ ಸಂಸ್ಥೆಗಳು ಸ್ಥಳೀಯವಾಗಿ ಸಿಗುತ್ತಿರುವುದು ಬೆಳವಣಿಗೆಗೆ ನಾಂದಿ ಎಂದರು.
ಪುಸ್ತಕ ಬಿಡುಗಡೆ: ಕಾಲೇಜಿನ ತೃತೀಯ ಬಿಕಾಂ ವಿದ್ಯಾರ್ಥಿನಿ ಕುಮಾರಿ ಅರುಣ ಬರೆದಿರುವ 'ಬೆಂಕಿ ಚೆಂಡು' ಕವನ ಸಂಕಲನವನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಗ್ರಾಮೀಣ ಭಾಗದ ವಿದ್ಯಾರ್ಥಿನಿಯ ಸಾಧನೆಯನ್ನು ಗಣ್ಯರು ಅಭಿನಂದಿಸಿದರು.
ಗ್ರಾಪಂ ಅಧ್ಯಕ್ಷ ನಾರಾಯಣಪ್ಪ, ಸುಗುಣ ಪೌಲ್ಟ್ರೀ ಫಾರಂ ಡಿಜಿಎಂ ವೇಲುಮಣಿ, ಜನಾರ್ಧನ್ ರೆಡ್ಡಿ, ಅಮ್ಜಾದ್, ಮುನಿರಾಜ್, ವೆಂಕಟೇಗೌಡ, ಸುಬ್ರಾಯ್ ಸೇಠ್, ಆನಂದಪ್ಪ, ದೇವರಾಜ್, ಮಾಲಾ ಸೇರಿದಂತೆ ಕಾಲೇಜು ಅಡಳಿತ ಮಂಡಳಿ ಸದಸ್ಯರು, ಅಧ್ಯಾಪಕವರ್ಗದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

