ಇಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸೂಲಿಬೆಲೆ: ಸೂಲಿಬೆಲೆ ಟೌನ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಬೀರೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸೂಲಿಬೆಲೆ ಹೋಬಳಿ ಕಾಂಗ್ರೆಸ್ ಎಸ್ಟಿ ಘಟಕ ಅಧ್ಯಕ್ಷ ವೆಂಕಟೇಶ್ ತಿಳಿಸಿದ್ದಾರೆ. ಟೌನ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿ ಎನ್.ನಾಗರಾಜ್ ಅವರ ಗೆಲವಿಗೆ ಹೆಚ್ಚಿನ ಶ್ರಮ ವಹಿಸಿ ದುಡಿಯಬೇಕಿದೆ. ಬೂತ್ ಮಟ್ಟದ ಸದಸ್ಯರಿಂದ ಹಿಡಿದ ಸಾಮಾನ್ಯ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಭಾಗವಹಿಸಬೇಕಿದೆ. ಬೆಳಿಗ್ಗೆ 10.30 ಸಭೆ ಪ್ರಾರಂಭವಾಗಲಿದೆ.
ಶುಲ್ಕ ಪಾವತಿಗೆ 20ರಂದು ಕಡೆ ದಿನ
ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳಿಗೆ 2013ರ ಜೂನ್ನಲ್ಲಿ ನಡೆಯುವ ಪ್ರಥಮ ಹಾಗೂ ದ್ವಿತೀಯ ವರ್ಷದ ಎಂಎ, ಎಂಕಾಂ ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಿಗೆ ದಂಡಶುಲ್ಕವಿಲ್ಲದೆ ಪರೀಕ್ಷಾ ಶುಲ್ಕ ಪಾವತಿಸಲು ಏ.20 ಕಡೆ ದಿನವಾಗಿರುತ್ತದೆ. 200 ದಂಡ ಶುಲ್ಕದೊಂದಿಗೆ ಪರೀಕ್ಷಾ ಶುಲ್ಕ ಪಾವತಿಸಲು ಮೇ.8 ಕಡೆ ದಿನವಾಗಿರುತ್ತದೆ. ಶುಲ್ಕ ಪಾವತಿಸುವ ಅರ್ಜಿಯನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದ್ದು, ತಲುಪದಿರುವ ವಿದ್ಯಾರ್ಥಿಗಳು ಪ್ರಾದೇಶಿಕ ನಿರ್ದೇಶಕರ ಕಚೇರಿ, ಪ್ರಾದೇಶಿಕ ಕೇಂದ್ರ, ಶಾಂತಿನಿಕೇತನ ಶಿಕ್ಷಣ ಸಂಸ್ಥೆ, ರಾಮನಗರ ಇಲ್ಲಿ ಖುದ್ದಾಗಿ ಪಡೆಯಬಹುದು. ಪರೀಕ್ಷಾ ಶುಲ್ಕವು ಒಂದು ಪತ್ರಿಕೆಗೆ 450, 2 ಪತ್ರಿಕೆಗೆ 650, 3ಕ್ಕೂ ಹೆಚ್ಚಿನ ಪತ್ರಿಕೆಗಳಿಗೆ ಹಾಗೂ ಪೂರ್ಣ ಪರೀಕ್ಷೆಗೆ 950. ಹೆಚ್ಚಿನ ಮಾಹಿತಿಗೆ ಕ.ರಾ.ಮು.ವಿ. ವೆಬ್ಸೈಟ್ ಅಥವಾ ರಾಮನಗರ ಪ್ರಾದೇಶಿಕ ಕೇಂದ್ರ ಕಚೇರಿ ದೂ.08027274443 ಸಂಪರ್ಕಿಸಬಹುದು.
ಅಲ್ಪಸಂಖ್ಯಾತರ ಸಮಾವೇಶ ಇಂದು
ಮಾಗಡಿ: ತಾಲೂಕಿನ ಕುದೂರಿನಲ್ಲಿ ಏ.10 ರಂದು ಬುಧವಾರ 11 ಗಂಟೆಗೆ ಅಲ್ಪಸಂಖ್ಯಾತರ ಸಮಾವೇಶವನ್ನು ಏರ್ಪಡಿಸಿರುವುದಾಗಿ ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕ ನರಸಿಂಹಮೂರ್ತಿ ತಿಳಿಸಿದ್ದಾರೆ.
16ರಿಂದ ಉಚಿತ ಬೇಸಿಗೆ ಶಿಬಿರ
ರಾಮನಗರ: ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 9ರಿಂದ 16 ವರ್ಷದ ಮಕ್ಕಳಿಗಾಗಿ ಏ.16ರಿಂದ 25ರವರೆಗೆ 10 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ನಗರದ ಐಜೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಚಿತ್ರಕಲೆ, ಸಮೂಹ ಗೀತೆ, ಸಮೂಹ ನೃತ್ಯ, ಕರಾಟೆ, ಯೋಗ, ಮೆಹಂದಿ, ರಂಗ ಕಲೆಗಳ ಕುರಿತು ತರಬೇತಿ ನೀಡಲಾಗುವುದು. ಮಾಹಿತಿಗೆ ದೂ.080-7273036 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

