ಬೆಂಗಳೂರು ಗ್ರಾಮಾಂತರ

ಸುದ್ದಿ ಸಂಕ್ಷೇಪ

Published On :

ಚುನಾವಣಾ ವೀಕ್ಷಕರ ನೇಮಕ
ರಾಮನಗರ: 2013ರ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಚುನಾವಣಾ ವೀಕ್ಷಕರನ್ನು ಕೇಂದ್ರ ಚುನಾವಣಾ ಆಯೋಗ ನೇಮಿಸಿದೆ. 183-ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ತಮಿಳುನಾಡು ರಾಜ್ಯದ ಐ.ಆರ್.ಎಸ್. ಅಧಿಕಾರಿ ಎಸ್.ಅನ್ಬುಸಲ್ವಂ, 184-ಕನಕಪುರ ಕ್ಷೇತ್ರಕ್ಕೆ ತಮಿಳುನಾಡಿನ ಐ.ಆರ್.ಎಸ್. ಅಧಿಕಾರಿ ಆರ್.ವಿ.ಅರುಣ್ಪ್ರಸಾದ್, 182-ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಕೇರಳ ರಾಜ್ಯದ ಐ.ಆರ್.ಎಸ್. ಅಧಿಕಾರಿ ಶಾಂತಂ ಬೋಸ್, 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಒರಿಸ್ಸಾ ರಾಜ್ಯದ ಐ.ಎ. ಮತ್ತು ಎ.ಎಸ್. ಅಧಿಕಾರಿ ಬಿ.ಕೆ.ಮೊಹಂತಿ ಕಾರ್ಯ ನಿರ್ವಹಿಸುವರು.  ಚುನಾವಣಾ ವೀಕ್ಷಕರು ಏ.10ರಿಂದ ಮೇ.5ರವರೆಗೆ ನೇಮಕಗೊಂಡಿರುವ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವರು ಎಂದು ತಿಳಿಸಲಾಗಿದೆ.
ಚುನಾವಣಾಧಿಕಾರಿ ವಿವರ
ರಾಮನಗರ: ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವವರ ವಿವರ. 182-ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಎಂ.ಎಲ್.ವೈಶಾಲಿ, ಯೋಜನಾ ನಿರ್ದೇಶಕರು,(ಡಿ.ಯು.ಡಿ.ಸಿ) ರಾಮನಗರ (ಮೊ.9449759069). 183-ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಡಾ.ರಾಜೇಂದ್ರಪ್ರಸಾದ್, ಉಪ ವಿಭಾಗಾಧಿಕಾರಿಗಳು, (ಮೊ.9449817984). 184-ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಡಾ.ಎಂ.ವಿ.ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ರಾಮನಗರ (ಮೊ.9731948080). 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಪಿ.ಜಯಮಾಧವ, ವಿಶೇಷ ಭೂಸ್ವಾಧೀನಾಧಿಕಾರಿ, ರಾಮನಗರ (ಮೊ.9448888282) ಇವರು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವರು. ಆಯಾ ತಾಲೂಕು ತಹಸೀಲ್ದಾರ್ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಅರ್ಜಿ ಆಹ್ವಾನ
ಬೆಂಗಳೂರು: ನಗರದ 'ವಾಸವಿ ಯೂನಿಯನ್' 2012ನೇ ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ಅಂಕ ಗಳಿಸಿರುವ ಹಾಗೂ ರ್ಯಾಂಕ್ ಪಡೆದಿರುವ ಆರ್ಯವೈಶ್ಯ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.  ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ, ಐಐಎಸ್ಸಿ, ಐಐಎಂ, ಚಾರ್ಟರ್ಡ್ ಅಕೌಂಟೆನ್ಸಿ, ಎಸಿಎಸ್, ಐಐಟಿ, ಯುಪಿಎಸ್ಸಿ, ಕೆಪಿಎಸ್ಸಿ ಹಾಗೂ ಪಿಎಚ್ಡಿಗಳಲ್ಲಿ ಅತ್ಯಧಿಕ ಅಂಕ/ರ್ಯಾಂಕ್ ಗಳಿಸಿದವರು ಅರ್ಜಿ ಸಲ್ಲಿಸಬಹುದು. 2012ನೇ ಕ್ಯಾಲೆಂಡರ್ ವರ್ಷದಲ್ಲಿ ಕ್ರೀಡೆ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ 35 ವರ್ಷದೊಳಗಿನವರು 'ವಾಸವಿ ಯೂನಿಯನ್'ನ ಸ್ವರ್ಣ ಪದಕಕ್ಕೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಏ. 30ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ. ಮಾಹಿತಿಗಾಗಿ ದೂ.ಸಂ. 080 26676042, 26625996. ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.