ಅಧ್ಯಕ್ಷರಿಗೇ ಮಾಹಿತಿ ಇಲ್ಲದೆ ಕಾರ್ಯಕ್ರಮ: ಆರೋಪ
ಕ.ಪ್ರಭ. ವಾರ್ತೆ ದೊಡ್ಡಬಳ್ಳಾಪುರ ಏ.10
ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಹೆಸರನ್ನು ಬಳಸಿಕೊಂಡು ಕೆಲವರು ಕಾರ್ಯಕ್ರಮ ರೂಪಿಸಿ ಕಾರ್ಯಕರ್ತರನ್ನು ಹಾದಿ ತಪ್ಪಿಸಿದ್ದಾರೆ ಎಂದು ಕರವೇ ತಾ.ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್ ಆರೋಪಿಸಿದ್ದಾರೆ.
ಮಂಗಳವಾರ ಇಲ್ಲಿನ ರಾಜಘಟ್ಟ ರವಿ ಅವರ ನೇತೃತ್ವದಲ್ಲಿ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮ ನಡೆದಿದೆ. ಹಿಂದೆ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಜಘಟ್ಟ ರವಿ, ಈಗ ಕರವೇಯ ಯಾವುದೇ ಹುದ್ದೆಯಲ್ಲೂ ಇಲ್ಲ. ಆದರೆ ಅದರಲ್ಲಿ ಕರವೇ ಹೆಸರು ಬಳಕೆ ಮಾಡಿಕೊಂಡಿರುವುದು ಅಕ್ಷಮ್ಯ. ತಾಲೂಕು ಅಧ್ಯಕ್ಷರ ಗಮನಕ್ಕಾಗಲೀ, ರಾಜ್ಯಾಧ್ಯಕ್ಷರ ಗಮನಕ್ಕಾಗಲೀ, ರಾಜ್ಯ ಉಪಾಧ್ಯಕ್ಷರ, ಕಾರ್ಯಾಧ್ಯಕ್ಷರ ಗಮನಕ್ಕಾಗಲೀ ತಾರದೇ ಈ ಕಾರ್ಯಕ್ರಮ ರೂಪಿಸಿದ್ದಾರೆ. ಜೊತೆಗೆ ಹಾಲಿ ಪದಾಧಿಕಾರಿಗಳಿಗೆ ಕೂಡ ತಪ್ಪು ಮಾಹಿತಿ ನೀಡಿ ಕಾರ್ಯಕ್ರಮ ನಡೆಸಿದ್ದಾರೆ. ಹೀಗಾಗಿ ಇದು ಕರವೇ ನಿಯಮಗಳ ಉಲ್ಲಂಘನೆಯಾಗಿದೆ. ಈ ಹಿನ್ನಲೆಯಲ್ಲಿ ಎಲ್ಲ ಬೆಳವಣಿಗೆಗಳನ್ನು ರಾಜ್ಯಾಧ್ಯಕ್ಷ ಶಿವರಾಮೇಗೌಡರ ಗಮನಕ್ಕೆ ತರಲಾಗಿದೆ. ರಾಜ್ಯಾಧ್ಯಕ್ಷರು ಕೂಡ ಈ ಬೆಳವಣಿಗೆಯನ್ನು ವಿರೋಧಿಸಿದ್ದಾರೆ ಎಂದಿರುವ ಅವರು ಕರವೇ ಹೆಸರು ದುರ್ಬಳಕೆ ಮಾಡಿಕೊಂಡಿರುವವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

