ಉತ್ತಮರನ್ನು ಆಯ್ಕೆ ಮಾಡಿ: ಸುರೇಶ್
ನೆಲಮಂಗಲ: ಜನತೆಯ ಹಿತ ಬಯಸುವ ಜನ ಪ್ರತಿನಿಧಿಗಳನ್ನು ಆಯ್ಕೆಗೊಳಿಸುವುದು ಯುವ ಮತದಾರರ ಕರ್ತವ್ಯವಾಗಿದೆ ಎಂದು ವಕೀಲ ಸುರೇಶ್ ಕಿವಿಮಾತು ಹೇಳಿದ್ದಾರೆ.
ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಪುರಸಭೆ ಹಾಗೂ ಮುನಿಯಮ್ಮ ಓಬಳಯ್ಯ ವಿದ್ಯಾವಾಹಿನಿ ಸಂಸ್ಥೆ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಶಿಬಿರದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯುವ ಮತದಾರರು ರಾಜಕಾರಣಿಗಳ ಆಸೆ ಆಮಿಷಗಳಿಗೆ ಒಳಗಾಗದೆ, ನಾಗರಿಕ ಸಮಾಜಕ್ಕೆ ಅರಿವು ಮೂಡಿಸಿ ಉತ್ತಮ ಆಡಳಿತ ನೀಡಬಲ್ಲ ವ್ಯಕ್ತಿಗಳನ್ನು ಆಯ್ಕೆಗೊಳಿಸಿದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರತಿಪಾದಿಸಿದರು. ಕೆ.ಒ.ಮಹೇಶ್, ಮುಖಂಡ ರಾಜಣ್ಣ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

