ಬೆಂಗಳೂರು ಗ್ರಾಮಾಂತರ

ನೆಲಮಂಗಲ: ನಾಲ್ಕು ಕಡೆ ಚೆಕ್‌ಪೋಸ್ಟ್

Published On :

ನೆಲಮಂಗಲ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾಧಿಕಾರಿ ಆದೇಶದಂತೆ ಕ್ಷೇತ್ರದಲ್ಲಿ 4 ಕಡೆ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.
ಕ್ಷೇತ್ರದ ಸೋಂಪುರ ಹೋಬಳಿ ಲಕ್ಕೂರು, ತ್ಯಾಮಗೊಂಡ್ಲು ಹೋಬಳಿ ಮುದ್ದಲಿಂಗನಹಳ್ಳಿ, ಕಸಬಾ ಹೋಬಳಿ ರೈಲ್ವೆಗೊಲ್ಲಹಳ್ಳಿ ಹಾಗೂ ಸೋಲೂರಿನಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ.
ತಪಾಸಣೆಗೆ ಸೂಚನೆ: ಚೆಕ್‌ಪೋಸ್ಟ್‌ಗಳಲ್ಲಿ ನಿಗಾ ಘಟಕಗಳು ಹೆಚ್ಚಿನ ಹಣ, ಅಕ್ರಮ ಮದ್ಯ, ಅನುಮಾನಾಸ್ಪದ ವಸ್ತುಗಳ ಸಾಗಣೆ ಸಂಬಂಧ ನಿಗಾ ವಹಿಸಲಿವೆ. ಅನುಮಾನಾಸ್ಪದವಾಗಿ ಕಂಡು ಬಂದ ವಾಹನ ಹಾಗೂ ವ್ಯಕ್ತಿಗಳನ್ನು ಪರಿಶೀಲಿಸಿ ವಿಚಾರಣೆಗೆ ಒಳಪಡಿಸಲಿವೆ.ವಿಚಾರಣೆ ವೇಳೆ ಸಮರ್ಪಕ ಮಾಹಿತಿ ಹಾಗೂ ದಾಖಲಾತಿಗಳನ್ನು ಒದಗಿಸುವಲ್ಲಿ ಹಣ, ವಸ್ತುಗಳನ್ನು ಜಪ್ತಿ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ವಾಹನ ತಡೆ, ಪರಿಶೀಲನೆ, ವಶಪಡಿಸಿಕೊಳ್ಳುವಿಕೆ ಪ್ರಕ್ರಿಯೆಯ ವಿಡಿಯೋ ಚಿತ್ರೀಕರಣ ಮಾಡಲಾಗುವುದು.  ಪ್ರಕರಣದಲ್ಲಿ ಸಿಲುಕುವ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ. ವಶಪಡಿಸಿಕೊಂಡ ಹಣ, ವಸ್ತುಗಳನ್ನು 24 ತಾಸಿನಲ್ಲಿ ಖಜಾನೆಗೆ ಜಮಾ ಮಾಡಲಾಗುತ್ತದೆ. ವರದಿಯನ್ನು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಚುನಾವಣಾ ಆಯೋಗಕ್ಕೆ ನೀಡಲಾಗುವುದು.ಕಸಬಾ ಹೋಬಳಿ ತಂಡ ಮುಖ್ಯಾಧಿಕಾರಿ ನೆಲಮಂಗಲ ಯೋಜನಾ ಪ್ರಾಧಿಕಾರದ ಉಪ ನಿರ್ದೇಶಕ ಎನ್.ನಂಜೇಗೌಡ, ತ್ಯಾಮಗೊಂಡ್ಲು ಹೋಬಳಿಗೆ ಲೋಕೋಪಯೋಗಿ ಇಲಾಖೆ ಸಹಾಯಕ ಅಭಿಯಂತರ ನಂಜುಂಡಸ್ವಾಮಿ, ಸೋಂಪುರ ಹೋಬಳಿಗೆ ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಹರೀಶ(9844495531) ಘಟಕ ಮುಖ್ಯಸ್ಥರಾಗಿ ಕೆಲಸ ನಿರ್ವಹಿಸುವವರು. ಘಟಕದಲ್ಲಿ 4 ಜನ ಸಿಬ್ಬಂದಿ, ವಿಡಿಯೋಗ್ರಾಫರ್ ಇರುತ್ತಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.