ಅಂಬೇಡ್ಕರ್ ಬದಕು ಬರಹ ಅಳವಡಿಸಿಕೊಳ್ಳಿ: ಡಾ. ವೆಂಕಟರಾಜು
ಕ.ಪ್ರ. ವಾರ್ತೆ ದೇವನಹಳ್ಳಿ ಏ.14
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ರವರ 122 ನೆ ಜಯಂತಿಯನ್ನು ಇಲ್ಲಿನ ಮಿನಿ ವಿಧಾನಸೌಧದಲ್ಲಿ ಭಾನುವಾರ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸರಳವಾಗಿ ಆಯೋಜಿಸಲಾಗಿತ್ತು.
ಡಾ.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ್ ಡಾ.ವೆಂಕಟರಾಜು ಮಾತನಾಡಿ, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ನೀಡಿರುವ ಸಂವಿಧಾನ ಪ್ರಪಂಚದ ಯಾವುದೇ ವಿಶ್ವಕೋಶಕ್ಕೂ ಕಡಿಮೆ ಇಲ್ಲ, ಅವರ ಬರಹಗಳನ್ನು ಎಲ್ಲರೂ ಆಳವಾಗಿ ಅಧ್ಯಯನ ಮಾಡಿ ಅದರ ಆಶಯದಂತೆ ನಡೆಯಬೇಕು ಎಂದರಲ್ಲದೆ ನಮ್ಮಲ್ಲಿ ಜಾತಿ ವ್ಯವಸ್ಥೆ ಹೋದರೆ ಮಾತ್ರ ದೇಶ ಮುಂದುವರೆಯಲು ಸಾಧ್ಯ ಎಂದರು.
ದಲಿತ ಸಂಘರ್ಷ ಸಮಿತಿಯ ಮುಖಂಡರಾದ ಕಾರಹಳ್ಳಿ ಶ್ರೀನಿವಾಸ್ ಮಾತನಾಡಿ, ಡಾ.ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತರಾದವರಲ್ಲ. ಎಲ್ಲ ಜಾತಿಗಳ ಸಮಾನತೆಗಾಗಿ ಹೋರಾಡಿದವರು. ಅಲ್ಲದೆ ಸಾವಿರಾರು ತಬ್ಬಲಿ ಜಾತಿಗಳಿಗೆ ತಾಯಿ ಸ್ಥಾನದಲ್ಲಿದ್ದರು. ನಮ್ಮ ಮಕ್ಕಳಿಗೆ ಶಿಕ್ಷಣ ನೀಡುವುದರ ಮೂಲಕ ಅಂಬೇಡ್ಕರ್ ಅವರ ಕನಸು ನನಸಾಗಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಎಸ್. ಗುರಪ್ಪ, ಬುಳ್ಳಹಳ್ಳಿ ರಾಜಪ್ಪ ಹಾಗೂ ಪ್ರಸನ್ನಕುಮಾರ್ ಅವರು ಡಾ.ಅಂಬೇಡ್ಕರ್ ಬಗ್ಗೆ ಮಾತನಾಡಿದರು. ಸಮಾರಂಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಶ್ರೀನಿವಾಸ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ್, ದಲಿತ ಸಂಘಟನೆಗಳ ಮುಖಂಡರಾದ ಜಿ.ಮಾರಪ್ಪ, ತಾಲೂಕು ಪಂಚಾಯಿತಿ ಸದಸ್ಯರಾದ ನರಸಿಂಹಮೂರ್ತಿ, ಹ್ಯಾಡಾಳ ದೇವರಾಜ್, ಮೋಹನ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

