'ತತ್ವಾದರ್ಶ ನಮಗೆ ದಾರಿ ದೀಪ'
ಕ.ಪ್ರ. ವಾರ್ತೆ ಮಾಗಡಿ ಏ.14
ಮಹಾ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳು ನಮ್ಮೆಲ್ಲರಿಗೂ ದಾರಿ ದೀಪ ಎಂದು ತಾಪಂ ಇಓ ಅಕ್ಕೋಜಿ ನುಡಿದರು.
ಅವರು ಪಟ್ಟಣದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಅವರ 122ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡುತ್ತಾ, ಸಂವಿಧಾನಾತ್ಮಕ ಹಕ್ಕುಗಳನ್ನು ನೀಡಿದ ವಿಶ್ವ ಶ್ರೇಷ್ಠ ಮಹಾನ್ ನಾಯಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ದಲಿತ ಮುಖಂಡರಾದ ಸಿ.ಜಯರಾಮು, ಕಲ್ಕೆಶಿವಣ್ಣ, ಬೆಳ್ಳಿಯಪ್ಪ, ಚಕ್ರಭಾವಿ ಭೈರಪ್ಪ, ಜಿ.ಕೃಷ್ಣ, ನರಸಿಂಹಯ್ಯ, ಚಿಕ್ಕಣ್ಣ, ರಾಜಣ್ಣ, ಸಿಪಿಐ ಯು.ಡಿ. ಕೃಷ್ಣಕುಮಾರ್, ಜಿಪಂ ಸಹಾಯಕ ಅಭಿಯಂತರ ರವಿ ಎಸ್. ಸುರಾನ್, ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ. ರಾಜಶೇಖರ್, ಸಮಾಜ ಕಲ್ಯಾಣಾಧಿಕಾರಿ, ರಾಜಣ್ಣ, ಬಿಇಓ ರಂಗಸ್ವಾಮಿ, ಪುರಸಭಾ ಮುಖ್ಯಾಧಿಕಾರಿ ಆರ್. ಮಂಜುನಾಥ್, ಮೂರ್ತಿ,ಚುನಾವಣಾ ಶಾಖಾ ಶಿರಸ್ದೇದಾರ್ ಶಿವಕುಮಾರ್ ಇತರರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

