ಸ್ವಾರ್ಥ ರಹಿತ ಹೋರಾಟದಿಂದ ದಲಿತರ ಉದ್ಧಾರ
ಕ.ಪ್ರ.ವಾರ್ತೆ, ಸೂಲಿಬೆಲೆ ಏ.14
ಶೋಷಿತರ ಪರವಾಗಿ ದನಿ ಎತ್ತಿ ಹೋರಾಟ ಮಾಡಿದ ಡಾ.ಬಿ.ಆರ್ ಅಂಬೇಡ್ಕರ್ ಕನಸು ನನಸಾಗಲು
ದಲಿತರ ಸಂಘಟನೆಗಳು ಸ್ವಾರ್ಥ ರಹಿತ ಹೋರಾಟ ಮಾಡಿದಾಗ ಮಾತ್ರ ದಲಿತ ಸಮುದಾಯ ಇತರೆ ಸಮುದಾಯದೊಂದಿಗೆ ಸಮನಾಗಿ ಉದ್ಧಾರವಾಗಲು ಸಾಧ್ಯ ಎಂದು ಸಮಾತ ಗ್ರಾಮೀಣಾಭಿವೃದ್ಧಿ ಕಾರ್ಯದರ್ಶಿ ಪ್ರಶಾಂತ್ಹೇಳಿದ್ದಾರೆ.
ಸೂಲಿಬೆಲೆ ಬಳಿಯ ಅತ್ತಿಬೆಲೆ ಸರ್ಕಾರಿ ಶಾಲೆ ಆವರಣದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ 122ನೇ ಜನ್ಮ ದಿನಾಚರಣಿ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಸರ್ಕಾರಿ ಪದವಿ ಕಾಲೇಜು ಉಪನ್ಯಾಸಕ ಪ್ರೊ.ನಾರಾಯಣಸ್ವಾಮಿ ಮಾತನಾಡಿ, ಅಂಬೇಡ್ಕರ್ ವಿಚಾರ ಧಾರೆಗಳನ್ನು ವಿದ್ಯಾರ್ಥಿಗಳು ಅರಿತು ಸಮಾಜದ ಪರಿರ್ವತನೆಗೆ ಕಾರಣವಾಗಬೇಕು. ಸಾಮಾಜಿಕ ನ್ಯಾಯ ಮತ್ತು ಸಂವಿಧಾನ ರಚನೆಯಲ್ಲಿ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದರು. ಸೂಲಿಬೆಲೆ ಸಹಕಾರ ಬ್ಯಾಂಕ್ ವ್ಯವಸ್ಥಾಪಕ ಶ್ರೀನಿವಾಸಮೂರ್ತಿ, ಮುಖ್ಯ ಶಿಕ್ಷಕ ಶರಣಪ್ಪ ಕಂಬಳಿ ಅಂಬೇಡ್ಕರ್ ಅವರ ಜೀವನದ ಮಹತ್ವವನ್ನು ತಿಳಿಸಿಕೊಟ್ಟರು. ಇದೇ ವೇಳೆ ಹಲವರನ್ನು ಸನ್ಮಾನಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣಪ್ಪ, ಉಪಾಧ್ಯಕ್ಷ ಸುಬ್ರಹ್ಮಣ್ಯ, ಮುಖಂಡ ಹರೀಶ್, ಕುಪ್ರೇಂದ್ರ ಸೇರಿದಂತೆ ಗ್ರಾಮದ ಮುಖಂಡರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಶಿಕ್ಷಕರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

