ಬೆಂಗಳೂರು ಗ್ರಾಮಾಂತರ

ಅರ್ಥಪೂರ್ಣ ದಿನಾಚರಣೆ

Published On :

ಕ.ಪ್ರ. ವಾರ್ತೆ ದೊಡ್ಡಬಳ್ಳಾಪುರ ಏ.14
ಇಲ್ಲಿನ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 122ನೇ ಜನ್ಮದಿನಾಚರಣೆ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಕೊಂಗಾಡಿಯಪ್ಪ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಡಾ.ಅಂಬೇಡ್ಕರ್ ಪುತ್ಥಳಿಗೆ ಹಲವಾರು ಮುಖಂಡರು, ಗಣ್ಯರು ಮಾಲಾರ್ಪಣೆ ಮಾಡಿ ಆಧುನಿಕ ಭಾರತದ ಮಹಾಶಿಲ್ಪಿಗೆ ಗೌರವ ನಮನ ಸಲ್ಲಿಸಿದರು.
ಕಾಂಗ್ರೆಸ್ ನೇತೃತ್ವದಲ್ಲಿ ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಕ್ಷೇತ್ರದ ನಿಯೋಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ, ತಾಲೂಕು ಕಾರ್ಯದರ್ಶಿ ಜಿ.ಲಕ್ಷ್ಮೀಪತಿ, ಯುವ ಮುಖಂಡ ಡಾ.ನಾರಾಯಣ್, ಉಕ್ಕು ಸಚಿವಾಲಯದ ಸದಸ್ಯ ಸಿ.ಜಿ.ನಾಗೇಶ್, ಡಿ.ವಿ.ಅಶ್ವತ್ಥಪ್ಪ, ಜವಾಜಿ ಸೀತಾರಾಂ ಮತ್ತಿತರರು ಭಾಗವಹಿಸಿ ಮಾಲಾರ್ಪಣೆ ಮಾಡಿದರು.
ಛಲವಾದಿ ಮಹಾಸಭಾದ ನೇತೃತ್ವದಲ್ಲಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮತ್ತು ಪದಾಧಿಕಾರಿಗಳು, ಸಂಘದ ಸದಸ್ಯರು-ಕಾರ್ಯಕರ್ತರು ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅದೇ ರೀತಿ ಮಾದಾರ ಚನ್ನಯ್ಯ ಮಹಾಸಭಾದ ತಾಲೂಕು ಘಟಕ, ದೊಡ್ಡಬಳ್ಳಾಪುರ ನಗರಸಭೆ, ಬಹುಜನ ಸಮಾಜ ಪಕ್ಷ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ವಾದ), ದಲಿತ ಸಂಘಟನೆಗಳ ಒಕ್ಕೂಟ ಗೌರವ ವಂದನೆ ಸಲ್ಲಿಸಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.