ಲಿಂಬಾವಳಿ ನಾಮಪತ್ರ ಸಲ್ಲಿಕೆ
ಕ.ಪ್ರ.ವಾರ್ತೆ , ಕೃಷ್ಣರಾಜಪುರ , ಏ.15
ಮಹದೇವಪುರ ಮೀಸಲು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ ನಾಮಪತ್ರ ಸಲ್ಲಿಸಿದರು.
ಕೃಷ್ಣರಾಜಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಕಚೇರಿಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಅವರು ಚುನಾವಣಾ ಅಧಿಕಾರಿ ಶಿವಸ್ವಾಮಿಯವರಿಗೆ ನಾಮಪತ್ರ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008 ರಲ್ಲಿ ಕ್ಷೇತ್ರದ ಜನತೆ ತಮ್ಮ ಮೇಲೆ ವಿಶ್ವಾಸವಿಟ್ಟು ಮತ ನೀಡಿ ಜಯಶೀಲರನ್ನಾಗಿ ಮಾಡಿದರು. ಅವರ ನಂಬಿಕೆ ಮತ್ತು ವಿಶ್ವಾಸವನ್ನು ಹುಸಿಗೊಳಿಸದೆ 5 ವರ್ಷಗಳಲ್ಲಿ ಸುಮಾರು 1300 ಕೋಟಿಗೂ ಅಧಿಕ ಅನುದಾನ ತಂದು ಅಭಿವೃದ್ಧಿ ಪಡಿಸಿರುವುದರಿಂದ ಕ್ಷೇತ್ರದ ಜನತೆ ಮತ್ತೊಮ್ಮೆ ತಮ್ಮನ್ನು ಬೆಂಬಲಿಸುವ ವಿಶ್ವಾಸ ವ್ಯಕ್ತ ಪಡಿಸಿದರು. ಮುಂದಿನ ಅಧಿಕಾರವಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಭರವಸೆ ನೀಡಿದರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಎ.ಸಿ.ಶ್ರೀನಿವಾಸ್ ಮತ್ತು ಪಕ್ಷೇತರ ಅಭ್ಯರ್ಥಿಗಳಾಗಿ ಮುನಿವೆಂಕಟಪ್ಪ, ಗಣೇಶ್, ಶಿವಕುಮಾರ್ ನಾಮಪತ್ರಗಳನ್ನು ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

