ಹ್ಯಾಟ್ರಿಕ್ ಗೆಲವು ಖಚಿತ: ಬಾಲಕೃಷ್ಣ ವಿಶ್ವಾಸ
ಕ.ಪ್ರ.ವಾರ್ತೆ , ಮಾಗಡಿ , ಏ.15
ಎಚ್.ಡಿ.ಕುಮಾರಸ್ವಾಮಿ ಅವರ 20 ತಿಂಗಳ ಜನಪರ ಆಡಳಿತ, ನನ್ನ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳನ್ನು ಜನತೆ ಮೆಚ್ಚಿದ್ದು, ಈ ಬಾರಿ ಹ್ಯಾಟ್ರಿಕ್ ಗೆಲವು ಬಾರಿಸುವುದಾಗಿ ಜೆಡಿಎಸ್ ಅಭ್ಯರ್ಥಿ ಶಾಸಕ ಎಚ್.ಸಿ. ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಮಾಗಡಿ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿ ಹೊರ ಬಂದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ 20 ತಿಂಗಳಲ್ಲಿ 60 ವರ್ಷದ ಅಭಿವೃದ್ಧಿಯ ಸಾಧನೆಯನ್ನು ಮಾಡಿ ತೋರಿಸಿದ್ದಾರೆ. ಶೋಷಿತ ದಲಿತರ ಕಾಲೊನಿಗಳಿಗೆ ತೆರಳಿ ಗ್ರಾಮ ವಾಸ್ತವ್ಯ ಮಾಡಿ ಅಲ್ಲಿನ ಸಮಸ್ಯೆಗಳನ್ನು ಅರಿತು ಅಭಿವೃದ್ಧಿ ಬಿರುಗಾಳಿ ಬೀಸಿದ್ದಾರೆ. ಅವರ ಕೈಗೊಂಡ ಜನಪರ ಅಭಿವೃದ್ಧಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಮತ್ತೆ ಬರಲಿದೆ. ಈ ಬಾರಿ ಎಚ್ಡಿಕೆ ಮುಖ್ಯಮಂತ್ರಿಯಾಗುವುದನ್ನು ಯಾರು ತಪ್ಪಿಸಲಾರರು. ನನ್ನ ಕ್ಷೇತ್ರದಲ್ಲಿಯೂ ಮತದಾರರ ದೇವರು ನನ್ನನ್ನು ಗೆಲ್ಲಿಸಲು ಸ್ವಯಂ ಪ್ರೇರಿತರಾಗಿ ಬಂದಿದ್ದಾರೆ ಎಂದರು.
ಜೆಡಿಎಸ್ ಅಭ್ಯರ್ಥಿ ಎಚ್.ಸಿ. ಬಾಲಕೃಷ್ಣ ಅವರನ್ನು ಕ್ಷೇತ್ರದ ಹ್ಯಾಟ್ರಿಕ್ ಹೀರೋ ಮಾಡುವುದೇ ನಮ್ಮ ಮುಂದಿರುವ ಗುರಿ ಎಂದು ಬಮೂಲ್ ನಿರ್ದೇಶಕ ನರಸಿಂಹಮೂರ್ತಿ ತಿಳಿಸಿದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎನ್. ಅಶೋಕ್, ಜಿ.ಪಂ. ಸದಸ್ಯ ಧನಂಜಯ ಸೇರಿದಂತೆ ಸಹಸ್ರಾರು ಕಾಯಕರ್ತರು ಜೊತೆಗಿದ್ದರು.
ನಾಮಪತ್ರ ಸಲ್ಲಿಕೆ: ಕಲ್ಯಗೇಟ್ ವರಸಿದ್ಧಿ ಶ್ರೀವಿನಾಯಕ ಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಶಾಸಕ ಎಚ್.ಸಿ. ಬಾಲಕೃಷ್ಣ ತನ್ನ ಅಸಂಖ್ಯಾತ ಬೆಂಬಲಿಗರೊಂದಿಗೆ ಭವ್ಯ ಮೆರವಣಿಗೆಯಲ್ಲಿ ತಾಲೂಕು ಕಚೇರಿಗೆ ಸುಮಾರು 12.30ಕ್ಕೆ ಆಗಿಸಿದರು.
ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ರಾಧ ಬಾಲಕೃಷ್ಣ, ತಾಯಿ ಶಾರದಮ್ಮ, ಜಿ.ಪಂ. ಮಾಜಿ ಸದಸ್ಯ ವೀರಪ್ಪ, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ ಹಾಜರಿದ್ದು, ಅಭ್ಯರ್ಥಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸುಮಾರು 12.45ಕ್ಕೆ ನಾಮಪತ್ರವನ್ನು ಚುನಾವಣಾಧಿಕಾರಿ ಎಂ.ವಿ. ವೈಶಾಲಿ ಅವರಲ್ಲಿ ಸಲ್ಲಿಸಿದರು. ನಂತರ ಅಸಂಖ್ಯಾತ ಅಭಿಮಾನಿಗಳೊಂದಿಗೆ ತೆರಳಿದ ಬಾಲಕೃಷ್ಣ ತಿರುಮಲೆ ಪ್ರಸಿದ್ಧ ಶ್ರೀರಂಗನಾಥಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

