ಕನಕಪುರದಲ್ಲಿ 3 ಅಭ್ಯರ್ಥಿಗಳ ನಾಮಪತ್ರ
ಕನಕಪುರ: ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಬುಧವಾರ ಕನಕಪುರದಲ್ಲಿ ಮೂರು ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಕರ್ನಾಟಕ ಜನತಾಪಕ್ಷದ ಅಭ್ಯರ್ಥಿ ಎಂ.ಮಧುಗೌಡ, ಅಂಬೇಡ್ಕರ್ ಪಕ್ಷದ ಕಾಳಯ್ಯ, ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಗೋವಿಂದರಾಜು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ಕೆಜೆಪಿ ಅಭ್ಯರ್ಥಿ ಮಧುಗೌಡ ಮಾತನಾಡುತ್ತಾ, ಕನಕಪುರ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಜನರು ಮರೆಯಲಾಗದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ಬಿಎಸ್ವೈ ಅವರು ಯುವಕರಿಗೆ ಪ್ರಾತಿನಿಧ್ಯ ನೀಡಲು ನಿರ್ಧರಿಸಿದ್ದು ಕನಕಪುರದಿಂದ ಸ್ಫರ್ಧಿಸಲು ತಮಗೆ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಜಿಲ್ಲಾಪ್ರಧಾನ ಕಾರ್ಯದರ್ಶಿ ಬಿ.ಎಲ್.ಶ್ರೀನಿವಾಸ್, ತಾಲೂಕು ಅಧ್ಯಕ್ಷ ಕೃಷ್ಣೇಗೌಡ, ಯುವ ಘಟಕದ ಅಧ್ಯಕ್ಷ ವೃಷಭೇಂದ್ರ ಪಾಲ್ಗೊಂಡಿದ್ದರು. ನಾಮಪತ್ರ ಸಲ್ಲಿಕೆಗೆ ಮುನ್ನ ಮಧುಗೌಡ ತಮ್ಮ ಬೆಂಬಲಿಗರೊಂದಿಗೆ ಇಲ್ಲಿನ ಕಾಳಿಕಾಂಬಾ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಾಮಪತ್ರವನ್ನು ಚುನಾವಣಾಧಿಕಾರಿ ವೆಂಕಟೇಶ್ ಅವರಿಗೆ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

