ಬೆಂಗಳೂರು ಗ್ರಾಮಾಂತರ

ಜಿ.ಚಂದ್ರಣ್ಣ ಬಿಜೆಪಿಯಿಂದ ನಾಮಪತ್ರ

Published On :

ದೇವನಹಳ್ಳಿ: ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಶಾಸಕ ಜಿ.ಚಂದ್ರಣ್ಣ ಅವರು ದಂಪತಿ ಸಮೇತತರಾಗಿ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿಯಾಗಿ ಇಲ್ಲಿನ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ತಮ್ಮ ನಾಮಪತ್ರ ಸಲ್ಲಿಸಿದರು.
ಚಂದ್ರಣ್ಣ ನಾಮಪತ್ರ ಸಲ್ಲಿಸುವುದಕ್ಕೆ ಮುನ್ನ ಇಲ್ಲಿನ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಆಗಮಿಸಿದರು.  ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡರಾದ ಎಂ.ನಾರಾಯಣಗೌಡ, ಕೆ.ನಾಗೇಶ್, ತಾಲೂಕು ಅಧ್ಯಕ್ಷರಾದ ಹನುಮಂತರಾಯಪ್ಪ, ದೇ.ಸೂ.ನಾಗರಾಜ್, ಎ.ಸಿ.ಗುರುಸ್ವಾಮಿ, ವಕೀಲರಾದ ಹರೀಶ್ ಹಾಗೂ ಇತರ ಅಭಿಮಾನಿಗಳು ಭಾಗವಹಿಸಿದ್ದರು.
ಕಾಂಗ್ರೆಸ್ ಪ್ರಮುಖರು ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಮುನಿನರಸಿಂಹಯ್ಯ ಸಹ ಪಕ್ಷೇತರರಾಗಿ ತಮ್ಮ ನಾಮಪತ್ರ ಸಲ್ಲಿಸಿದರು.
ಇವರೊಂದಿಗೆ ಆವತಿಯ ಎ.ವಿ.ನಾರಾಯಣಸ್ವಾಮಿ, ಎ.ಚಿನ್ನಪ್ಪ, ಭೂವನಹಳ್ಳಿ ಮುನಿರಾಜು, ಸಿ.ಕೆ.ರಾಮಚಂದ್ರಪ್ಪ, ಎಸ್.ಜಿ.ನಾರಾಯಣಸ್ವಾಮಿ, ಲೋಕೇಶ್ ಭಾಗವಹಿಸಿದ್ದರು.
ಶಾಸಕ ವೆಂಕಟಸ್ವಾಮಿರವರು ಕಳೆದ ಸೋಮವಾರ ತಮ್ಮ ನಾಮಪತ್ರವನ್ನು ಅಧಿಕೃತವಾಗಿ ಸಲ್ಲಿಸಿದ್ದರೂ ಇಂದು ಹತ್ತು ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಆಗಮಿಸಿ ಮತ್ತೆ ತಮ್ಮ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್ ಹಾಗೂ ಪ್ರಮುಖರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.