ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ: 12 ನಾಮಪತ್ರ

Published On :

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 12 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಬುಧವಾರ ಬಹುತೇಕ ಪ್ರಮುಖ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಈ ಮೊದಲೇ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ, ಜೆಡಿಎಸ್ ಅಭ್ಯರ್ಥಿ ಸಿ.ಚನ್ನಿಗಪ್ಪ ಕೂಡ ಬುಧವಾರ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ವೆಂಕಟರಮಣಯ್ಯ, ಕೆಜೆಪಿ ಅಭ್ಯರ್ಥಿ ವಿ.ನಾಗೇಂದ್ರಪ್ರಸಾದ್, ಜೆಡಿಎಸ್ ಬಂಡಾಯ ಪಕ್ಷೇತರ ಅಭ್ಯರ್ಥಿ ಬಿ.ಮುನೇಗೌಡ,ಬಿಎಸ್‌ಆರ್ ಕಾಂಗ್ರೆಸ್ ಅಭ್ಯರ್ಥಿ ಕುಮಾರ್, ಕರ್ನಾಟಕ ಮಕ್ಕಳ ಪಕ್ಷ ಬೆಂಬಲಿತ ಅಭ್ಯರ್ಥಿ ಮಹೇಶ್, ಪಕ್ಷೇತರ ಅಭ್ಯರ್ಥಿ ಆನಂದ್, ಮತ್ತಿಬ್ಬರು ಪಕ್ಷೇತರ ಅಭ್ಯರ್ಥಿಗಳು ಸೇರಿದಂತೆ 9 ಅಭ್ಯರ್ಥಿಗಳು ಬುಧವಾರ ನಾಮಪತ್ರ ಸಲ್ಲಿಸಿದರು. ಒಟ್ಟಾರೆ ಕ್ಷೇತ್ರದಲ್ಲಿ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.