ಮದುವೆ ದಿಬ್ಬಣ ಬಸ್ ಪಲ್ಟಿ: 30ಕ್ಕೂ ಹೆಚ್ಚು ಜನರಿಗೆ ಗಾಯ
ಕ.ಪ್ರ. ವಾರ್ತೆ ಟಿ ದೊಡ್ಡಬಳ್ಳಾಪುರ ಟಿ ಏ.17
ಮದುವೆ ದಿಬ್ಬಣದ ಬಸ್ ಪಲ್ಟಿ ಹೊಡೆದ ಪರಿಣಾಮ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಬಳಿಯ ವಾಣಿಗರಹಳ್ಳಿಯಲ್ಲಿ ಬುಧವಾರ ರಾತ್ರಿ 9 ಗಂಟೆ ವೇಳೆಯಲ್ಲಿ ನಡೆದಿದೆ.
ದೊಡ್ಡಬಳ್ಳಾಪುರದ ಒಕ್ಕಲಿಗರ ಭವನದಲ್ಲಿ ನಡೆಯುತ್ತಿದ್ದ ಮದುವೆಗೆ ಕೊರಟಗೆರೆ ತಾಲೂಕಿನ ಬೈರಗೊಂಡ್ಲು ಗ್ರಾಮದಿಂದ ವರನ ಕಡೆಯವರ ದಿಬ್ಬಣ ಬರುತ್ತಿತ್ತು. ಸಂಜೆ ಬೈರಗೊಂಡ್ಲುವಿನಿಂದ ಹೊರಟಿದ್ದ ಖಾಸಗಿ ಬಸ್ ಬೈರಾಪುರ-ವಾಣಿಗರ ಹಳ್ಳಿ ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಸ್ನ ಚಕ್ರಗಳು ರಸ್ತೆ ಬದಿ ತೆಗೆಯಲಾಗಿದ್ದ ಹಳ್ಳಕ್ಕೆ ಇಳಿದಿವೆ. ಈ ವೇಳೆ ಚಾಲಕ ಬಸ್ನ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮವಾಗಿ ಬಸ್ ಪಲ್ಟಿ ಹೊಡೆದಿದೆ. ಘಟನೆ ವೇಳೆ ಬಸ್ಸಿನಲ್ಲಿ 60ಕ್ಕೂ ಹೆಚ್ಚು ಮಂದಿ ಇದ್ದರು ಎನ್ನಲಾಗಿದೆ.
ಗಾಯಾಳುಗಳ ವಿವರ: ಘಟನೆಯಲ್ಲಿ ಬೈರಗೊಂಡ್ಲು ಮತ್ತು ಸುತ್ತಮುತ್ತಲ ಗ್ರಾಮಗಳವರಾದ ಸಣ್ಣಲಕ್ಕಮ್ಮ, ವಿಜಯಕುಮಾರ್, ಹನುಮಂತರಾಯಪ್ಪ, ಕುಮಾರ್ ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಇವರ ಸ್ಥಿತಿ ಗಂಭೀರವಾಗಿದೆ. ಇವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಳಿದಂತೆ ಪ್ರವೀಣ್, ಆಂಜಿನಪ್ಪ, ಹನುಮಯ್ಯ, ಸಾಕಮ್ಮ, ಸುಶೀಲಮ್ಮ, ರಂಗಪ್ಪ, ಸಂಜೀವಪ್ಪ, ತಿಮ್ಮರಸಯ್ಯ, ರಾಜುಗೌಡ, ಗಂಗರಾಜು, ರವಿಕುಮಾರ್, ತಿಮ್ಮಯ್ಯ, ರಮೇಶ, ತರಟಮ್ಮ, ವಿಜಯ್, ಈರಮ್ಮ, ಮೋಹನ್, ರಮೇಶ್, ಮಲ್ಲಪ್ಪ, ಗಂಗಾಧರಯ್ಯ, ಸುನೀಲ್, ಪ್ರಸನ್ನಕುಮಾರ್, ಹರೀಶ್ಕುಮಾರ್, ಮಧುಸೂದನ್, ರಂಗಣ್ಣ, ನಾಗರಾಜ್, ಮುತ್ತುರಾಯಪ್ಪ ಸೇರಿದಂತೆ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳು ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

