ದೇವನಹಳ್ಳಿಯಲ್ಲಿ ಇಂದು ಎಚ್ಡಿಕೆ ಪ್ರಚಾರ
ಕ.ಪ್ರ.ವಾರ್ತೆ , ದೇವನಹಳ್ಳಿ , ಏ.18
ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪಿಳ್ಳಮುನಿಶಾಮಪ್ಪ ಅವರ ಪರವಾಗಿ ಶುಕ್ರವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಜೆಡಿಎಸ್ ಮುಖಂಡ ಸಿ.ನಾರಾಯಣಸ್ವಾಮಿ ಗುರುವಾರ ನಡೆದ ಪಕ್ಷದ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು.
ನಾರಾಯಣಸ್ವಾಮಿ ಮಾತನಾಡಿ ಶುಕ್ರವಾರ ಕುಮಾರಸ್ವಾಮಿ ಚುನಾವಣಾ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಅನೇಕ ಮುಖಂಡರು ಜೆಡಿಎಸ್ಗೆ ಸೇರ್ಪಡೆಯಾಗಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಅಭ್ಯರ್ಥಿಯಾಗಿರುವ ಪಿಳ್ಳಮುನಿಶಾಮಪ್ಪರವರು ಮಾತನಾಡಿ ನನಗೆ ಅಧಿಕೃತ ಅಭ್ಯರ್ಥಿಯಾಗಲು ಅವಕಾಶ ಮಾಡಿಕೊಟ್ಟ ಮುಖಂಡರಾದ ದೇವೇಗೌಡರವರಿಗೂ, ಕುಮಾರಸ್ವಾಮಿ ಅವರಿಗೂ ಹಾಗೂ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಅವರಿಗೂ ಕೃತಜ್ಞತೆ ಸಲ್ಲಿಸಿ ಪ್ರತಿ ಗ್ರಾಮದಲ್ಲೂ ನಮ್ಮ ಕಾರ್ಯಕರ್ತರು ಪ್ರಚಾರ ಮಾಡಿ, ನಿಮ್ಮ ಗೆಲುವೇ ನನ್ನ ಗೆಲವು ಎಂದು ತಿಳಿಸಿದರು. ಸಭೆಯಲ್ಲಿ ಪುರಸಭಾ ಸದಸ್ಯರುಗಳಾದ ವೈ.ಸಿ.ಸತೀಶ್ಕುಮಾರ್, ಗೋಪಾಲಕೃಷ್ಣ, ಕಾರ್ಪೆಂಟರ್ ನಾರಾಯಣಸ್ವಾಮಿ, ಮುನಿನಂಜಪ್ಪ, ಖುದ್ದುಸ್ ಸಾಹೇಬರು, ಗಣೇಶಬಾಬು, ಹಾಗೂ ಮಹಿಳಾ ಘಟಕದ ಉಷಾ ಪೂರ್ಣಚಂದ್ರ ಇವರುಗಳು ಪಕ್ಷದ ಸಂಘಟನೆ ಬಗ್ಗೆ ಮಾತನಾಡಿದರು. ಸಭೆಯಲ್ಲಿ ಹಿರಿಯರಾದ ಆರ್.ಎನ್.ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಮುನಿಶಾಮಯ್ಯ ಉಪಸ್ಥಿತರಿದ್ದರು.ಅಧ್ಯಕ್ಷತೆಯನ್ನು ಆರ್.ನಾರಾಯಣಸ್ವಾಮಿ ವಹಿಸಿದ್ದರು. ಜಿ.ಎ.ರವೀಂದ್ರ ಸ್ವಾಗತ ಕೋರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

