ಸಮರ್ಥ ಆಡಳಿತಕ್ಕೆ ಕಾಂಗ್ರೆಸ್ ಬೆಂಬಲಿಸಿ
ಸೂಲಿಬೆಲೆ: ಸಮರ್ಥ ಮತ್ತು ಸುದೀರ್ಘ ಆಡಳಿತ ನಡೆಸುವ ಶಕ್ತಿಯನ್ನು ಹೊಂದಿರುವ ಕಾಂಗ್ರೆಸ್ಪ್ಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತನು ಶ್ರಮವಹಿಸಬೇಕು ಎಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್ ಕರೆ ನೀಡಿದ್ದಾರೆ. ಸೂಲಿಬೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದೇಶದಲ್ಲಿ ಸಮರ್ಥ ಆಡಳಿತವನ್ನು ನೀಡಿ ಜನರ ಮನದಲ್ಲಿರುವ ಕಾಂಗ್ರೆಸ್ ಪಕ್ಷ ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಮತದಾರರು ಮನಸ್ಸು ಮಾಡಬೇಕು ಎಂದರು.
ಸೇರ್ಪಡೆ: ಸೂಲಿಬೆಲೆ ಪಟ್ಟಣದ ಕೆಲ ವಾರ್ಡುಗಳಲ್ಲಿದ್ದ ಬಿಜೆಪಿ ಕಾರ್ಯಕರ್ತರು ಆ ಪಕ್ಷವನ್ನು ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದರು ಎಂದು ಮುಖಂಡ ಶಿವರುದ್ರಪ್ಪ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಖಲಂದರ್ ಖಾನ್, ಗ್ರಾಪಂ ಸದಸ್ಯ ಅಮ್ಜಾದ್, ಎಸ್.ಕೆ. ರಾಘವೇಂದ್ರ, ಎಸ್ಟಿ ಘಟಕ ಅಧ್ಯಕ್ಷ ವೆಂಕಟೇಶ್, ಶಫೀವುಲ್ಲಾ, ಮೌಲ, ಲಕ್ಷ್ಮಣ್, ಮುನಿರಾಜ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

