ಬೆಂಗಳೂರು ಗ್ರಾಮಾಂತರ

ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿವುದು ಖಚಿತ: ಮೊಯ್ಲಿ

Published On :

ಕ.ಪ್ರ. ವಾರ್ತೆ ,  ನೆಲಮಂಗಲ ,   ಏ. 20
ಕಾಂಗ್ರೆಸ್ ಪಕ್ಷದ ತತ್ವಸಿದ್ಧಾಂತವನ್ನು ಒಪ್ಪಿ ಅನ್ಯ ಪಕ್ಷದ ಕಾರ್ಯಕರ್ತರು  ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಂ. ವೀರಪ್ಪಮೊಯ್ಲಿ  ಹೇಳಿದರು.
ಅವರು ಶನಿವಾರ ಪಟ್ಟಣದ ಬಸವಣ  ,ದೇವರ ಮಠದ ಆವರಣದಲ್ಲಿ ಕಾಂಗ್ರೇಸ್ ಸಮಾವೇಶ ಮತ್ತು ವಿವಿಧ ಪಕ್ಷಗಳಿಂದ ಬಂದ ನಾಯಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಮಾತನಾಡುತ್ತಾ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಕಾರ್ಯಕರ್ತರಿಗೂ ಹಾಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈ ಕ್ಷೇತ್ರವನ್ನು ಗೆಲವಿಗಾಗಿ ಪ್ರತಿಷ್ಠಿತ ಕಣವಾಗಿ ತೆಗೆದುಕೊಳ್ಳಬೇಕು. ನೀವು ತೊರೆದು ಬಂದ ಪಕ್ಷ ಸೋತಾಗ ನಿಮ್ಮ ಉದ್ದೇಶ ಸಾರ್ಥಕವಾಗುತ್ತದೆ ಎಂದರು.
ಐಕ್ಯತೆಯೇ ಕಾಂಗ್ರೆಸ್  ಶಕ್ತಿಯಾಗಿದೆ. ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಮಾಡಿರುವ ಭ್ರಷ್ಟಾಚಾರ, ಸ್ವಜನ ಪಕ್ಷಪಾತ  ಕಿತ್ತೊಗೆದು 50 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರವನ್ನು ಬಯಲುಗೊಳಿಸಿ ಸಂಬಂಧಿಸಿದ ನಾಯಕರನ್ನು ಕಾನೂನಿನ ಅಡಿಯಲ್ಲಿ ಶಿಕ್ಷಿಸಲು ಮುಂದಾಗಬೇಕಾದರೆ ತಾವೆಲ್ಲರೂ ಸಹ ಕಾಂಗ್ರೆ ಸಿನ ಭವಿಷ್ಯವನ್ನು  ರೂಪಿಸುವ ಶಕ್ತಿಯಾಗಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಎತ್ತಿನ ಹೊಳೆಯ ಯೋಜನೆಯನ್ನು ಜಾರಿಗೆ ತಂದರು. ನೆಲಮಂಗಲ, ದೊಡ್ಡಬಳ್ಳಾಪುರ ಸೇರಿದಂತೆ ಇತರೆ ತಾಲೂಕುಗಳ ಕೆರೆಗಳನ್ನು ತುಂಬಿಸುವ ಕೆಲಸಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಇಂದಿನ ಬಿಜೆಪಿ ಸರ್ಕಾರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಮಾಡಲೇ ಇಲ್ಲ. ಕಾವೇರಿಯ 4ನೇ ಹಂತದ ಯೋಜನೆ ಜಾರಿಗೆಯಾಗಿದ್ದರೆ  ಬೆಂಗಳೂರಿನ ಕೆಲ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬಹುದಾಗಿತ್ತು. ಬಿಜೆಪಿ ಸರ್ಕಾರ ಎಲ್ಲಾ ಅಭಿವೃದ್ಧಿಯನ್ನು ಮರೆತು ಹಣ ಮಾಡುವುದನ್ನೇ ಉದ್ಯೋಗ ಮಾಡಿಕೊಂಡರು ಎಂದು ಆರೋಪಿಸಿದರು
ಅಭ್ಯರ್ಥಿ ಅಂಜನಮೂರ್ತಿ, ಶಾಸಕ ನೆ.ಲ ನರೇಂದ್ರಬಾಬು ತಮ್ಮ ಸಾಧನೆ ಮತ್ತು ಉದ್ದೇಶವನ್ನು ತಿಳಿಸಿ ಮತ ನೀಡುವಂತೆ ಮನವಿ ಮಾಡಿ ಮತ ಯಾಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.