ಬಾಲಕಿ ಮೇಲೆ ಅತ್ಯಾಚಾರ: ಖಂಡನೆ
ದೊಡ್ಡಬಳ್ಳಾಪುರ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 5 ವರ್ಷದ ಬಾಲಕಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸುವಂತಹ ಕೃತ್ಯ ಎಂದು ಮಾಜಿ ನಗರಸಭಾ ಸದಸ್ಯೆ ಪ್ರಮೀಳಾ ಮಹದೇವ್ ಖಂಡಿಸಿದ್ದಾರೆ. ದೇಶದಲ್ಲಿ ಈ ಬಗೆಯ ಕೃತ್ಯಗಳು ಪದೇ ಪದೇ ನಡೆಯುತ್ತಿದ್ದರೂ ಕಾನೂನು ಪರಿಪಾಲಕರು, ರಾಜಕಾರಣಿಗಳು ಮತ್ತು ಆಡಳಿತ ವ್ಯವಸ್ಥೆ ವಹಿಸಿರುವ ದಿವ್ಯಮೌನ, ಹೊಣೆಗೇಡಿತನ ಖಂಡನೀಯ. ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಕಾಮುಕರಿಗೆ ಕ್ಷಮಾದಾನ ನೀಡಬಾರದು. ಕಠಿಣ ಕಾನೂನು ರೂಪಿಸದ ಹೊರತು ಈ ಬಗೆಯ ಕೃತ್ಯಗಳಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ ಎನ್ನುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಅಪಘಾತ: ಇಬ್ಬರ ಸಾವು
ಹೊಸಕೋಟೆ: ಎರಡು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳು ಮೃತ ಪಟ್ಟು ಮತ್ತಿಬ್ಬರು ಗಾಯಗೊಂಡಿದ್ದಾರೆ. ಮಾಲೂರು ರಸ್ತೆಯ ಕರಬೀರನ ಹೊಸಹಳ್ಳಿ ಬಳಿ ಬೈಕ್ ಹಾಗೂ ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೃಕ್ ಸವಾರ ಡಿ.ಶೆಟ್ಟಿಹಳಿಯ ಮಂಜುನಾಥ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಕುಳಿತಿದ್ದ ನಿಂಬೆಕಾಯಿಪುರದ ಹರ್ಷವರ್ಧನ ಎಂಬಾತನ ಕಾಲು ಮೂಳೆ ಮುರಿದಿದ್ದು ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಕೋಲಾರ ರಸ್ತೆಯ ಅಲಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿ ಹೊಡೆದ ಕಾರಣ ತೀವ್ರ ಗಾಯಗೊಂಡ ಬೃಕ್ ಸವಾರ ಮೃಲಾಪುರದ ಮುನಿರಾಜು (40) ಚಿಕಿತ್ಸೆಗೆ ಸ್ಪಂದಿಸದೆ ಬೆಂಗಳೂರಿನ ನಿಮ್ಹಾನ್ಸ್ನಲ್ಲಿ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ಎನ್.ವೆಂಕಟೇಶ್ ಅವರಿಗೂ ಗಾಯಗಳಾಗಿವೆ. ಗಾರೆ ವೃತ್ತಿ ಮಾಡುತ್ತಿದ್ದ ಮುನಿರಾಜು ಹೊಸಕೋಟೆಯಲ್ಲಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಹೋಗುತ್ತಿದ್ದರು. ಹೊಸಕೋಟೆ ಪೊಲೀಸರು ಎರಡೂ ಪ್ರಕರಣ ದಾಖಲಿಸಿದ್ದಾರೆ.
ವಿಷ ಸೇವಿಸಿದ್ದ ಮಹಿಳೆ ಸಾವು
ಹೊಸಕೋಟೆ: ಕ್ರಿಮಿನಾಶಕ ಸೇವಿಸಿ ರಾಮಮೂರ್ತಿ ನಗರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಣೇಕಲ್ ಗ್ರಾಮದ ಮಮತಾ (27) ಮೃತ ಪಟ್ಟವರು. 11 ವರ್ಷದ ಕೆಳಗೆ ಮಂಜುನಾಥ ಎಂಬುವವರ ಜೊತೆ ಆಕೆಯ ವಿವಾಹವಾಗಿದ್ದು ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

