ಬೆಂಗಳೂರು ಗ್ರಾಮಾಂತರ

ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕರಿಸಿ: ಜಿಲ್ಲಾಧಿಕಾರಿ ಸೂಚನೆ

Published On :

ಕ.ಪ್ರ.ವಾರ್ತೆ  ,   ರಾಮನಗರ  ,   ಏ.22
ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳು ಸೂಕ್ಷ್ಮ ಕ್ಷೇತ್ರಗಳಾಗಿವೆ. ಈ ಹಿನ್ನೆಲೆಯಲ್ಲಿ  ಮದ್ಯ ಮುಕ್ತವಾದ ಚುನಾವಣೆಯಿಂದಷ್ಟೇ ಶಾಂತಿ, ಸುವ್ಯವಸ್ಥೆ ಕಾಪಾಡಲು ಸಾಧ್ಯ. ಈ ನಿಟ್ಟಿನಲ್ಲಿ ಸಹಕರಿಸುವಂತೆ ಅಬಕಾರಿ ಅಧಿಕಾರಿಗಳು ಮತ್ತು ಮದ್ಯ ಸನ್ನದುದಾರರಿಗೆ  ಜಿಲ್ಲಾಧಿಕಾರಿ ನವೀನ್ ರಾಜ್‌ಸಿಂಗ್ ಮದ್ಯ ಸನ್ನದುದಾರರಿಗೆ ಸೂಚಿಸಿದರು.
ಚುನಾವಣೆ ಸಂಬಂಧ ಜಿಲ್ಲಾಡಳಿತ ಕಚೇರಿಯಲ್ಲಿ  ಮದ್ಯ ಸನ್ನದುದಾರರು, ಅಬಕಾರಿ ಇಲಾಖೆ ಸಿಬ್ಬಂದಿ ಸಭೆ ನಡೆಸಿದ ಅವರು, ಮದ್ಯ ಸನ್ನದುದಾರರ ವ್ಯವಹಾರದ ಮೇಲೆ ಅಧಿಕಾರಿಗಳ ತಂಡ ನಿಗಾವಹಿಸಲಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ನಿಗದಿಪಡಿಸಿದ ಪ್ರಮಾಣಕ್ಕಿಂತ ಹೆಚ್ಚಿಗೆ ಮದ್ಯವನ್ನು ಬಿಕರಿ ಮಾಡಬಾರದು. ರಾಜಕೀಯ ಪಕ್ಷಗಳು ನೀಡುವ ಚೀಟಿಗೆ ಮದ್ಯ ವಿತರಣೆ ಮಾಡಬಾರದು. ಇದನ್ನು ಉಲ್ಲಂಘಿಸಿದವರ ಸನ್ನದನ್ನು ರದ್ದುಗೊಳಿಸುವುದಾಗಿ ಅವರು ಹೇಳಿದರು.
ಗೈರು ಹಾಜರಾದ ಸನ್ನದುದಾರರಿಗೆ ಕಾರಣಕೇಳಿ ನೋಟಿಸ್ ನೀಡುವಂತೆ ಅಬಕಾರಿ ನಿರೀಕ್ಷಕರಿಗೆ ಜಿಲ್ಲಾಧಿಕಾರಿ ಆದೇಶಿಸಿದರು. ಅಬಕಾರಿ ಉಪ ಆಯುಕ್ತ ಎಸ್.ಶ್ರೀನಿವಾಸಮೂರ್ತಿ, ಉಪ ಅಧೀಕ್ಷಕ ನರೇಂದ್ರಕುಮಾರ್, ಅಬಕಾರಿ ನಿರೀಕ್ಷಕರಾದ ನಾರಾಯಣ ನಾಯ್ಕ, ನಾಗರಾಜು, ಸುನೀಲ್, ಜಿಲ್ಲೆಯ ನಾಲ್ಕು ತಾಲೂಕುಗಳ ಮದ್ಯ ಸನ್ನದುದಾರರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.