ಶೋಷಿತರನ್ನು ಮುಖ್ಯವಾಹಿನಿಯಲ್ಲಿ ತರಬೇಕು ಎಂಬುದೇ ಕೆಜೆಪಿ ಗುರಿ: ಎಚ್.ಎಂ. ಕೃಷ್ಣಮೂರ್ತಿ
ಕ.ಪ್ರ. ವಾರ್ತೆ , ಮಾಗಡಿ , ಏ.22
ಶೋಷಿತರನ್ನು ಸಮಾಜದ ಮುಖ್ಯವಾಹಿನಿಯಲ್ಲಿ ತರಬೇಕು ಎಂಬುದೇ ಕೆಜೆಪಿ ಗುರಿ ಎಂದು ಕೆಜೆಪಿ ಅಭ್ಯರ್ಥಿ ಎಚ್.ಎಂ. ಕೃಷ್ಣಮೂರ್ತಿ ನುಡಿದರು.
ಅವರು ಕೆಜೆಪಿ ಕಚೇರಿಯಲ್ಲಿ ವಿವಿಧ ಪಕ್ಷಗಳ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ದೀನ ದಲಿತರು, ಹಿಂದುಳಿದ ಹಾಗು ಅಲ್ಪಸಂಖ್ಯಾತರ ಪರವಾದ ಯೋಜನೆಯನ್ನು ನೀಡುವ ಮೂಲಕ ಜನಪರ ಸೇವೆಯನ್ನು ಸಲ್ಲಿಸಿರುವ ಕೆಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈ ಬಲಪಡಿಸಲು ಕ್ಷೇತ್ರದ ಜನತೆ ಕೆಜೆಪಿ ಅಭ್ಯರ್ಥಿಯಾದ ನನಗೆ ಮತ ನೀಡಿ ಂದರು. ನನ್ನನ್ನು ಗೆಲ್ಲಿಸಿದರೆ ಹೇಮಾವತಿ ನೀರಾವರಿ ಯೋಜನೆ ತಂದೇ ತರುತ್ತೇನೆ. ಇದು ನನ್ನ ಕೇವಲ ಭರವಸೆಯಲ್ಲ, ಕ್ಷೇತ್ರದ ಒಕ್ಕರಲಿನ ಮತದಾರರು ಆಸೆ ಆಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್, ಬಿಜೆಪಿ ಪಕ್ಷದ ದುರಾಡಳಿತವನ್ನು ಜನತೆ ಈಗಾಗಲೇ ಕಂಡು ಸಾಕಷ್ಟು ನೋವನ್ನು ಅನುಭವಿಸಿದ್ದಾರೆ. ಕ್ಷೇತ್ರದಲ್ಲಿ ಹಣ ಚಲ್ಲಿ ಅಧಿಕಾರ ಹಿಡಿಯಬಹುದು ಎಂಬ ಭ್ರಮೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳು ಕನಸು ಕಾಣುತ್ತಿರಬಹುದು, ಹಿಡಿದ ಕೆಲಸವನ್ನು ನನಸು ಮಾಡುವುದೇ ನನ್ನ ಗುರಿ. ನಾನು ಕಳೆದ 14 ವರ್ಷಗಳಿಂದ ಕ್ಷೇತ್ರದಲ್ಲಿ ಜನಪರ ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿದ್ದೇನೆ. ನಿರಂತರವಾಗಿ ಧಾರ್ಮಿಕ ಕಾರ್ಯಗಳನ್ನು ಕೊಟ್ಟಿದ್ದೇನೆ. ಕ್ಷೇತ್ರದ ಮತದಾರರು ವಿಪಕ್ಷದ ಅಭ್ಯರ್ಥಿಗಳನ್ನು ಸಾರಸಾಟಾಗಿ ತಿರಸ್ಕರಿಸಿ, ಕೆಜೆಪಿಗೆ ಮತ ನೀಡುವ ಮೂಲಕ ನಿಮ್ಮ ಸೇವೆಗೆ ಅವಕಾಶ ಕಲ್ಪಿಸುವಂತೆ ಎಚ್.ಎಂ.ಕೃಷ್ಣಮೂರ್ತಿ ಕೋರಿದರು.
ಇದೇ ವೇಳೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರರಾದ ಬೆಳಗಂಬ ಬಸವರಾಜು, ರಾಜು, ಮೂರ್ತಿ ಜಯರಾಮು ಇತರರು ಕೆಜೆಪಿ ಅಭ್ಯರ್ಥಿ ಎಚ್.ಎಂ. ಕೃಷ್ಣಮೂರ್ತಿ ಸಮ್ಮುಖದಲ್ಲಿ ಸೇರ್ಪಡೆಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

