ಬೆಂಗಳೂರು ಗ್ರಾಮಾಂತರ

ಆಸ್ತಿ ಮಾಹಿತಿ ನೀಡಿ

Published On :

ಬೆಂಗಳೂರು:  ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ರಾಜರಾಜೇಶ್ವರಿನಗರದ ವಾರ್ಡ ನಂ 154ರ ವ್ಯಾಪ್ತಿಯಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಸಾರ್ವಜನಿಕ ಹಣಕಾಸು ಸಂಸ್ಥೆಗಳು ಮತ್ತು ಸರ್ಕಾರಕ್ಕೆ ನೀಡಬೇಕಾಗಿರುವ ಹೊಣೆಗಾರಿಕೆಗಳು ಹಾಗೂ ಬಾಕಿ ವಿವರವನ್ನು ಅನುಬಂಧ-14ರಲ್ಲಿ ನಮೂದಿಸಿ ಸಾರ್ವಜನಿಕ ಮಾಹಿತಿಗಾಗಿ ಪ್ರಕಟಿಸಬೇಕು ಎಂದು ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.
ವೆಚ್ಚ ಪರಿವೀಕ್ಷಣೆ
ಹೊಸಕೋಟೆ ವಿಧಾನಸಭಾ ಕ್ಷೇತ್ರದ 2013 ಸಾರ್ವತ್ರಿಕ ಚುನಾವಣೆ ವೆಚ್ಚ ವೀಕ್ಷಿಸಲು ನಿಯೋಜನೆಗೊಂಡಿರುವ ದಿನೇಶ್ ಕುಮಾರ್ ಅವರು ಏ.25, ಹಾಗೂ ಮೇ 3ರಂದು ಉಮೇದುವಾರರ ಚುನಾವಣಾ ವೆಚ್ಚಗಳ ಪರಿವೀಕ್ಷಣೆ ಮಾಡಲಿದ್ದಾರೆ. ಎ.ಬಿ.ಸಿ ವಹಿಗಳಲ್ಲಿ ವೆಚ್ಚಗಳನ್ನು ನಮೂದಿಸಲು ಸಂಬಂಧಪಟ್ಟ ರಸೀದಿಗಳೊಂದಿಗೆ ಬೆಳಗ್ಗೆ 10 ರಿಂದ ಸಂಜೆ 5ರೊಳಗೆ ಬಂದು ಮಾಹಿತಿ ನೀಡಬೇಕು ಎಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಚನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಮತ ಜಾಗೃತಿ ಜಾಥಾ
ಚುನಾವಣೆಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದು ನಗರ ಜಿ.ಪಂ. ಮುಖ್ಯ ನಿರ್ವಹಣಾಧಿಕಾರಿ ಬೆಟ್ಟಸ್ವಾಮಿ ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ವತಿಯಿಂದ ನಗರದ ಕೆಂಗೇರಿ ಸ್ಯಾಟಲೈಟ್ ಬಸ್‌ನಿಲ್ದಾಣದ ಮುಂಭಾಗದಲ್ಲಿ ಬುಧವಾರ ನಡೆದ ಮತದಾರರಲ್ಲಿ ಅರಿವು ಕಾರ್ಯಕ್ರಮದಲ್ಲಿ ಅವರು ಮಾನವ ಸರಪಳಿ, ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ದೇಶದ ಪ್ರಗತಿಗೆ ಎಲ್ಲರೂ ಮತಚಲಾಯಿಸಲೇ ಬೇಕು. ಇದು ನಿಮ್ಮ ಹಕ್ಕು ಎಂದರು. ನಂತರ ನಡೆದ ಜಾಥಾದಲ್ಲಿ ನೂರಾರು ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳು, ನೌಕರರು, ಕಲಾವಿದೆಯರು, ಭಾಗವಹಿಸಿ ಮತದಾನದ ಕುರಿತು ಜಾಗೃತಿ ಮೂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.