ಅಭಿವೃದ್ಧಿಗಾಗಿಬಿಜೆಪಿ ಆಶೀರ್ವದಿಸಿ: ಶೆಟ್ಟರ್
ಕ.ಪ್ರ. ವಾರ್ತೆ ನೆಲಮಂಗಲ ಏ.26
ಜನತೆ ಈ ಬಾರಿಯೂ ಬಿಜೆಪಿ ಆಶೀರ್ವದಿಸಿದರೆ ರಾಜ್ಯವನ್ನು ಅಭಿ ವೃದ್ಧಿಯಲ್ಲಿ ದೇಶದಲ್ಲೇ ನಂಬರ್1 ಸ್ಥಾನಕ್ಕೆ ತರುತ್ತೇವೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ಪಟ್ಟಣದ ಐಟಿಐ ಕಾಲೇಜು ಆವರಣದಲ್ಲಿ ಶುಕ್ರವಾರ ಬಿಜೆಪಿ ಏರ್ಪಡಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು.
ಕಳೆದ 30 ವರ್ಷಗಳಿಂದ ರಾಜ್ಯವನ್ನಾಳಿದ ಕಾಂಗ್ರೆಸ್ ಮಾಡಲಾರದಂತಹ ಅಭಿವೃದ್ಧಿ ಕಾರ್ಯವನ್ನು ಕೇವಲ 5 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಸಾಧನೆ ಮಾಡಿ ಜನತೆಯಿಂದ ಅನುಕೂಲಕರ ವಾತಾವರಣ ಪಡೆದಿದೆ ಎಂದು ನುಡಿದರು.
ಸರ್ಕಾರ ರೈತರ, ದೀನ ದಲಿತರ, ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿಶೇಷವಾದ ಯೋಜನೆಗಳನ್ನು ರೂಪಿಸಿರುವ ಸರ್ಕಾರ ಬಿಜೆಪಿ ಸರ್ಕಾರ ಎಂದು ಬಿಜೆಪಿ ಅಭ್ಯರ್ಥಿ ಶಾಸಕ ಎಂ.ವಿ.ನಾಗರಾಜು ಹೇಳಿದರು.
ಇದೆ ಸಂದರ್ಭದಲ್ಲಿ ಕೃಷ್ಣಪ್ಪ, ಗಂಗಾಧರಪ್ಪ, ಬಸವರಾಜು, ಧನಂಜಯ್ಯ, ರಾಜಶೇಖರ್, ಶಂಕರ್, ಸೋಲೂರು ನಾಗೇಶ್, ಎಣ್ಣೆಗೆರೆ ಕೃಷ್ಣಪ್ಪ ಜೆ.ಡಿ.ಎಸ್ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು.
ಸಚಿವ ಸೊಗಡು ಶಿವಣ್ಣ, ಮಲ್ಲಯ್ಯ, ಆನಂದ್, ರಾಜಮ್ಮ, ಮುರಾರಯ್ಯ, ನಂಜುಂಡಯ್ಯ, ಶಿವಾನಂದಶಿಂಧೆ, ಹ್ಯಾಡಾಳ್ ಸತೀಶ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

