ಕಾಂಗ್ರೆಸ್ಗೆ ಅಧಿಕಾರ ಸಿಕ್ಕರೆ ತಾಲೂಕಿಗೊಂದು ಸ್ತ್ರೀಶಕ್ತಿ ಭವನ
ಕ.ಪ್ರ. ವಾರ್ತೆ , ಮಾಗಡಿ , ಏ.28
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾಲೂಕಿಗೊಂದು ಸ್ತ್ರೀಶಕ್ತಿ ಭವನ ನಿರ್ಮಾಣ ಮಾಡುವ ಸಂಕಲ್ಪ ಹೊಂದಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ತಿಳಿಸಿದರು.
ಅವರು ತಾಲೂಕಿನ ತಾಳೇಕೆರೆ ಗ್ರಾಮದಲ್ಲಿ ಮನೆ, ಮನೆಗೆ ತೆರಳಿ ಮತಯಾಚಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗ್ರಾಮೀಣ ಭಾಗದ ರೈತರ ಬದುಕು ಹಸನಾಗಲು ಹೇಮಾವತಿ ನೀರಾವರಿ ಯೋಜನೆ ತರಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಕಾಂಗ್ರೆಸ್, ರೈತರೊಳಗೊಂಡ ಸಮಿತಿ ರಚಿಸಲಿದೆ. ಹಾಲು ಉತ್ಪಾದಕ ರೈತರಿಗೆ 2 ರು ನಿಂದ 4 ರುಗೆ ಪ್ರೋತ್ಸಾಹ ಧನ ಹೆಚ್ಚಿಸಲಿದೆ ಎಂದರು. ನಾನೊಬ್ಬ ಸಣ್ಣ ಕಾರ್ಯಕರ್ತ, ಬಹುಮತ ನೀಡುವ ಮೂಲಕ ನನಗೊಂದು ಅವಕಾಶ ಮಾಡಿಕೊಡಿ ಎಂದು ಎ.ಮಂಜು ಮನವಿ ಮಾಡಿಕೊಂಡರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಗಳೂರು ಗಂಗಾಧರ್ ಮಾತನಾಡಿ, ತಾಲೂಕಿನಲ್ಲಿ ನಡೆದಿರುವ ನೂರಾರು ಕೋಟಿ ಹಗರಣವನ್ನು ಹೋರಾಟದ ಮೂಲಕ ಜನತೆಗೆ ತಲುಪಿಸಿದ ಕೀರ್ತೀ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಅವರಿಗೆ ಸಲ್ಲುತ್ತದೆ. ಜನಪರ ಹೋರಾಟಗಾರ ಎ.ಮಂಜು ಅವರನ್ನು ನಾವೆಲ್ಲರು ಗೆಲ್ಲಿಸೋಣ, ತಾಲೂಕಿನ ಅಭಿವೃದ್ಧಿಗೆ ಸಹಕರಿಸೋಣ ಎಂದರು. ಬಿ.ಎಸ್. ಕುಮಾರ್ ಮಾತನಾಡಿ, ಕಾಂಗ್ರೆಸ್ನಿಂದ ಮಾತ್ರ ಸಾಮಾಜಿಕ ನ್ಯಾಯ. ದೀನ, ದಲಿತರ ಉದ್ಧಾರವಾಗಬೇಕಾದರೆ ಕಾಂಗ್ರೆಸ್ ಅಭ್ಯರ್ಥಿ ಎ.ಮಂಜುಗೆ ಮತ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
15 ವರ್ಷ ಶಾಸಕರಿಂದ ಅಭಿವೃದ್ಧಿಯಾಗಿಲ್ಲ: ಬಿ.ಎಸ್. ಸುಹೇಲ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಒಬ್ಬರೇ ಶಾಸಕರಾಗಿರಬೇಕು ಎಂದು ಸಂವಿಧಾನ ರಚಿಸಿಲ್ಲ. 15 ವರ್ಷ ಶಾಸಕರಾದವರಿಂದ ಕ್ಷೇತ್ರ ಅಭಿವೃದ್ಧಿ ಕಂಡಿಲ್ಲ. ನೀರು ಕೊಟ್ಟಿಲ್ಲ, ಬೋರ್ ಹಾಕಿಸಿಲ್ಲ. ನಿರುದ್ಯೋಗ ನಿವಾರಣೆಗೆ ಯುವಕರ ಕೈಗೆ ಉದ್ಯೋಗವಿಲ್ಲ, ಅಲ್ಪಸಂಖ್ಯಾತರಿಗೆ ಯಾವುದೇ ಸೌಲಭ್ಯ ನೀಡಲಿಲ್ಲ. ಇಂತಹ ಶಾಸಕ ನಮಗೆ ಬೇಕಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಎ.ಮಂಜು ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ಇದೇ ವೇಳೆ ಬಿಸ್ಕೂರು ಲಿಂಗಣ್ಣ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಸೇರ್ಪಡೆಗೊಂಡರು. ಬಿ.ವಿ.ಜಯರಾಮು, ದೊಡ್ಡಯ್ಯ, ಕುಮಾರ್, ಗಂಗಣ್ಣ, ಶಿವಣ್ಣ, ಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

