ಬೆಂಗಳೂರು ಗ್ರಾಮಾಂತರ

'ಕೈ' ಸೇರಿದ ಜೆಡಿಎಸ್ ಕಾರ್ಯಕರ್ತರು

Published On :

ರಾಮನಗರ: ತಾಲೂಕಿನ ಕೊಳ್ಳಿಗನಹಳ್ಳಿ ಮತ್ತು ಅಂಜನಾಪುರ ಗ್ರಾಮದ ವಿವಿಧ ಪಕ್ಷಗಳ ಕಾರ್ಯಕರ್ತರು ಅಭ್ಯರ್ಥಿ ಮರಿದೇವರು ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್‌ಗೆ  ಸೇರ್ಪಡೆಯಾದರು.  ಹಾರೋಹಳ್ಳಿ ಹೋಬಳಿಯ ಕೊಳ್ಳಿಗನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಹದಗೆಟ್ಟಿದ್ದು, ವಾಹನಗಳಲ್ಲಿ ಸಂಚರಿಸುವುದ ದುಸ್ಸಾಹಸವಾಗಿದೆ. ಬಸ್ ಸೌಕರ್ಯವೂ ಇಲ್ಲ. ಜೆಡಿಎಸ್ ಪ್ರಾಮಾಣಿಕ ಕಾರ್ಯಕರ್ತರಾಗಿದ್ದ ನಮ್ಮನ್ನು ಆ ಪಕ್ಷದ ಮುಖಂಡರು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ತೊರೆದವರು ದೂರಿದರು. ಕೆ.ರಾಜು ಶಾಸಕರಾಗಿ ಒಂದು ಬಾರಿಯೂ ನಮ್ಮ ಗ್ರಾಮಕ್ಕೆ ಭೇಟಿ ನೀಡಿಲ್ಲ. ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಂಡಿಲ್ಲ. ಮತ ಯಾಚನೆಗೆ ಬಂದ ಸಂದರ್ಭದಲ್ಲೂ ಭೇಟಿಯಾಗಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.