ಬೆಂಗಳೂರು ಗ್ರಾಮಾಂತರ

ಜಿ.ಚಂದ್ರಣ್ಣ ಪರ ನಟಿ ತಾರಾ ಪ್ರಚಾರ, ರೋಡ್ ಶೋ

Published On :

ದೇವನಹಳ್ಳಿ: ದೇವನಹಳ್ಳಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಿ.ಚಂದ್ರಣ್ಣ ಅವರ ಪರವಾಗಿ ಚಿತ್ರ ನಟಿ ತಾರಾ ಚುನಾವಣಾ ಪ್ರಚಾರ ನಡೆಸಿದರಲ್ಲದೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು.
ಬಿಜೆಪಿ ಅಭ್ಯರ್ಥಿ ಜಿ.ಚಂದ್ರಣ್ಣ ಮಾತನಾಡಿ, ಅಭಿವೃದ್ಧಿ ಕಾರ್ಯಗಳೇ ನನಗೆ ರಕ್ಷೆಯಾಗಿದ್ದು ತಾವು ಎಲ್ಲರ ಆಶೀರ್ವಾದದಿಂದ  ಜಯಗಳಿಸುವುದಾಗಿ ತಿಳಿಸಿದರು.
   ಇಲ್ಲಿನ ತಾಲೂಕು ಕಚೇರಿ ಬಳಿ ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಿಂದ ತೆರೆದ ವಾಹನದಲ್ಲಿ ಅಭ್ಯರ್ಥಿ ಜಿ.ಚಂದ್ರಣ್ಣ, ರಾಜ್ಯ ಬಿಜೆಪಿ ಮುಖಂಡರಾದ ಎಂ.ನಾರಾಯಣಗೌಡ, ಜಿಲ್ಲಾ ಮುಖಂಡರಾದ ಕೆ.ನಾಗೇಶ್, ದೇ.ಸೂ.ನಾಗರಾಜ್, ರಾಷ್ಟ್ರೀಯ ಪರಿಷತ್ ಸದಸ್ಯರಾದ ಎ.ಸಿ.ಗುರುಸ್ವಾಮಿ, ಹುರುಳುಗುರ್ಕಿ ಶ್ರೀನಿವಾಸ್ ಜೊತೆಯಲ್ಲಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಅಭಿಮಾನಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.