ತೋಕಸಂದ್ರ: ಮರಿದೇವರು ಮತಯಾಚನೆ
ಕ.ಪ್ರ. ವಾರ್ತೆ , ಕನಕಪುರ , ಏ.28
ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿದೇವರು ಕನಕಪುರ ತಾಲೂಕಿನ ತೋಕಸಂದ್ರ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಕಾಂಗ್ರೆಸ್ ಮುಖಂಡರಾದ ಜಿಪಂ ಸದಸ್ಯ ಗೀತಾ ಈಶ್ವರ್, ಜಿಪಂ ಮಾಜಿ ಸದಸ್ಯ ಎಂ.ಎನ್. ನಾಗರಾಜ್, ಎಲ್.ರಾಜು, ವಿಶ್ವಪ್ರಿಯ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.
ಅಭ್ಯರ್ಥಿ ಮರಿದೇವರು ಮಾತನಾಡುತ್ತಾ, ಸರ್ಕಾರಿ ಅಧಿಕಾರಿಯಾಗಿ ಜನಸೇವೆ ಮಾಡಿರುವ ತಾವು ಮೊದಲಿನಿಂದಲೂ ಸಮಾಜಸೇವೆಯಲ್ಲಿ ತೊಡಗಿದ್ದು, ವೃತ್ತಿಗೆ ರಾಜಿನಾಮೆ ನೀಡಿ ಜನಪರವಾಗಿ ದುಡಿಯುತ್ತಿದ್ದೇನೆ.
ಮತದಾನ ಮಾಡುವ ಮೂಲಕ ಅಧಿಕಾರ ನೀಡಿದರೆ ಶ್ರದ್ಧೆ ಪ್ರಾಮಾಣಿಕತೆಗಳಿಂದ ಕಾರ್ಯನಿರ್ವಹಿಸುತ್ತೇನೆ. ರಾಮನಗರ ಶಾಸಕ ಕೆ.ರಾಜು ಹಾಗೂ ಸಂಸದ ಕುಮಾರಸ್ವಾಮಿಯವರು ಕ್ಷೇತ್ರದ ಕಡೆಗೆ ತಲೆಹಾಕದೆ ನಿರ್ಲಕ್ಷಿಸಿದ್ದಾರೆ. ಸಂಸದರ ಅನುದಾನ ಚಿಕ್ಕಾಸೂ ಕ್ಷೇತ್ರಕ್ಕೆ ಬಿಡುಗಡೆಯಾಗಿಲ್ಲ ಎಂದು ಮರಿದೇವರು ಟೀಕಿಸಿದರು.
ಮುಖಂಡ ನಾಗರಾಜು ಮಾತನಾಡುತ್ತಾ, ರಾಮನಗರ, ಮರಳವಾಡಿಗಳು ಜೆಡಿಎಸ್ ಭದ್ರಕೋಟೆಯಾಗಿದ್ದವು. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಿಚ್ಚಳ ಬಹುಮತ ಗಳಿಸಲಿದೆ. ಕನಕಪುರ ತಾಲೂಕಿನ ಮತದಾರರು ಮರಿದೇವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

