ಬೆಂಗಳೂರು ಗ್ರಾಮಾಂತರ

ರಾಮನಗರದಲ್ಲಿ ಪ್ರಚಾರ ಬಿರುಸು

Published On :

ಕ.ಪ್ರ.ವಾರ್ತೆ  ,   ರಾಮನಗರ  ,   ಏ.28
ಚುನಾವಣೆ ದಿನ ಸಮೀಪಿಸುತ್ತಿರುವಂತೆಯೇ ಪ್ರಚಾರ ಬಿರುಸುಗೊಂಡಿದೆ. ಎಲ್ಲಾ ಪಕ್ಷಗಳ ಮುಖಂಡರು ಪ್ರತ್ಯೇಕ ತಂಡಗಳನ್ನು ರಚಿಸಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತಯಾಚನೆಯಲ್ಲಿ ತೊಡಗಿದ್ದಾರೆ.
ಜೆಡಿಎಸ್ ಕಸರತ್ತು: ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪರ ಶಾಸಕ ಕೆ.ರಾಜು, ವಿಧಾನ ಪರಿಷತ್ ಸದಸ್ಯ ಅಫ್ಸರ್ ಆಗಾ, ತಾಲೂಕು ಅಧ್ಯಕ್ಷ ಕೆ. ದೇವೇಗೌಡ, ಮುಖಂಡ ಡಿ. ಗಿರಿಗೌಡರ ನೇತೃತ್ವದಲ್ಲಿ ಕ್ಷೇತ್ರದ ವಿವಿಧೆಡೆ ಪ್ರಚಾರ ನಡೆಸಿದರು.
ಮಾಗಡಿ ಕ್ಷೇತ್ರದ ಅಭ್ಯರ್ಥಿ ಎಚ್.ಸಿ.ಬಾಲಕೃಷ್ಣ ಕೂಟಗಲ್ ಹೋಬಳಿ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಸಿದರು. ತಾ.ಪಂ. ಅಧ್ಯಕ್ಷೆ ಭಾನುಮತಿ ಬೋರೇಗೌಡ, ಸದಸ್ಯರಾದ ಶಿವಪ್ರಸಾದ್, ಸಿದ್ದಲಿಂಗೇಗೌಡ, ಮಾಜಿ ಸದಸ್ಯೆ ಸುಮಿತ್ರಮ್ಮ ಸಾಥ್ ನೀಡಿದರು.
ನಗರ ವ್ಯಾಪ್ತಿಯಲ್ಲಿ ಆಯಾ ವಾರ್ಡ್‌ಗಳ ಮುಖಂಡರು ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಮತ ಯಾಚಿಸಿದರು. ಜಿ.ಪಂ. ಮತ್ತು ತಾ.ಪಂ. ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿ ತಮ್ಮ ಪಕ್ಷಕ್ಕೆ ಮತ ನೀಡಬೇಕೆಂದು ಮತದಾರರ ಮನವೊಲಿಸುತ್ತಿದ್ದರು.
ಕಾಂಗ್ರೆಸ್ ತಂತ್ರ: ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಜತೆಗೂಡಿ ಅಭ್ಯರ್ಥಿ ಮರಿದೇವರು ಕೈಲಾಂಚ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಜಿ.ಪಂ. ಸದಸ್ಯೆಯೂ ಆಗಿರುವ ಮರಿದೇವರು ಅವರ ಪತ್ನಿ ಮಂಜುಳಾ ಅವರು ಹಾರೋಹಳ್ಳಿ, ಮರಳವಾಡಿ ಹೋಬಳಿಗಳಲ್ಲಿ ಮತಯಾಚನೆ ಮಾಡಿದರು.
ಬಿಜೆಪಿ ಪ್ರಚಾರ: ಬಿಜೆಪಿ ಅಭ್ಯರ್ಥಿ ಶಿವಮಾಧು ಅವರು ತಮ್ಮ ಬೆಂಬಲಿಗೆ ಜತೆಗೂಡಿ ಕಸಬಾ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ನಗರಸಭಾ ಸದಸ್ಯ ಬಿ.ನಾಗೇಶ್ ಅವರು ನಗರ ವ್ಯಾಪ್ತಿಯ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರ ಮನವೊಲಿಸಿದರು.
ಕೆಜೆಪಿ ಯಾಚನೆ: ರಾಮನಗರ ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಸ್.ಆರ್.ನಾಗರಾಜು ಅವರು ಹಾರೋಹಳ್ಳಿ ಹೋಬಳಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.
ಮಾಗಡಿ ಕ್ಷೇತ್ರದ ಅಭ್ಯರ್ಥಿ ಎಚ್.ಎಂ. ಕೃಷ್ಣಮೂರ್ತಿ ಬಿಡದಿ ಹೋಬಳಿಯ ಗ್ರಾಮಗಳಲ್ಲಿ ಪ್ರಚಾರದಲ್ಲಿ ತೊಡಗಿದ್ದರು. ಬಿಎಸ್‌ಆರ್ ಕಾಂಗ್ರೆಸ್, ಪಕ್ಷೇತರರು ವಿವಿಧೆಡೆ ಮತ ಭೇಟೆಯಲ್ಲಿ ನಿರತರಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.