ಸೌಕರ್ಯ ಕಲ್ಪಿಸುವ ಸದುದ್ದೇಶದಿಂದ ಸ್ಪರ್ಧೆ
ನೆಲಮಂಗಲ: ನೆಲಮಂಗಲ ವಿಧಾನ ಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮೂಲ ಸೌಕರ್ಯ ಕಲ್ಪಿಸುವ ಸದುದ್ದೇಶದಿಂದಾಗಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಅಭ್ಯರ್ಥಿ ಚೌಡಯ್ಯ ತಿಳಿಸಿದರು. ಅವರು ಸೋಮವಾರ ತಾಲ್ಲೂಕಿನ ವಾಜರಹಳ್ಳಿ ಗ್ರಾಮದಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಮಾತನಾಡುತ್ತಾ ನಾನು ಮೂಲತಃ ಸರ್ಕಾರಿ ನೌಕರ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು ಸರ್ಕಾರಿ ನೌಕರರ ರಾಜ್ಯ ಸಂಘದಲ್ಲಿ ಖಜಾಂಚಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನನ್ನನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕೆಜೆಪಿ ಅಭ್ಯರ್ಥಿಯಾಗುವಂತೆ ಒತ್ತಾಯಿಸಿದ್ದರಿಂದ ನನ್ನ ವೃತ್ತಿಗೆ ಸ್ವಯಂ ನಿವೃತ್ತಿಗೊಳಿಸಿಕೊಂಡು ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದೆ. ಆದರೆ ಕೊನೆ ಗಳಿಗೆಯಲ್ಲಿ ನನಗೆ ಟಿಕೆಟ್ ತಪ್ಪಿದ್ದರಿಂದ ಹತಾಶನಾಗಿ ಪಕ್ಷೇತರ ಅಭ್ಯರ್ಥಿಯಾಗಿ ಮತ ಯಾಚನೆ ಮಾಡುತ್ತಿದ್ದೇನೆ ಎಂದರು. ಪ್ರಚಾರ ಉದ್ದಕ್ಕೂ ನಿವೃತ್ತ ಸರ್ಕಾರಿ ನೌಕರರು ಬಂಧುಗಳು, ಹಿತೈಷಿಗಳು ನೂರಾರು ಮಂದಿ ಪ್ರಚಾರ ಕಾರ್ಯದಲ್ಲಿ ಸಾಥ್ ನೀಡುತ್ತಿದ್ದಾರೆ. ನಾನು ಸ್ಪರ್ಧೆಯಲ್ಲಿ ಉಳಿದಿದ್ದರಿಂದ ಹೆಚ್ಚಿನ ಹಿಂಬಾಲಕರು ನನ್ನೊಂದಿಗೆ ಕೈಜೋಡಿಸಿದ್ದಾರೆ. ಇದರಿಂದ ನನ್ನ ಗೆಲುವಿಗೆ ಅನುಮಾನವಿಲ್ಲವೆಂದು ವಿಶ್ವಾಸ ವ್ಯಕ್ತ ಪಡಿಸಿದರು.
ಜೆಡಿಎಸ್ ರಾಮಣ್ಣ ಕಾಂಗ್ರೆಸ್ಗೆ ಸೇರ್ಪಡೆ
ಸೂಲಿಬೆಲೆ: ಇಲ್ಲಿನ ಜೆಡಿಎಸ್ ಮುಖಂಡ ರಾಮಣ್ಣ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಸೂಲಿಬೆಲೆಯಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್ ಮಾತನಾಡಿ, ಸುಭದ್ರ ಮತ್ತು ಸ್ಥಿರ ಸರ್ಕಾರಕ್ಕೆ ಕಾಂಗ್ರೆಸ್ಅನ್ನು ಮತದಾರರು ಬೆಂಬಲಿಸಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದ್ದು ,ಈ ಬಾರಿ ಕಾಂಗ್ರೆಸ್ ಆಡಳಿತ ರಾಜ್ಯಕ್ಕೆ ಸಿಗುವುದು ಗ್ಯಾರೆಂಟಿ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡರಾದ ಚನ್ನಪ್ಪ, ಮರುವೆ ಕೃಷ್ಣಪ್ಪ, ಚಾಂದ್ ಪಾಷ, ವಿ. ಪ್ರಸಾದ್ ಹಾಜರಿದ್ದರು.
'ಓಟ್ ಬ್ಯಾಂಕ್ ರಾಜಕಾರಣ'
ಹೊಸಕೋಟೆ: ದಲಿತರನ್ನು ಕೇವಲ ಓಟ್ ಬ್ಯಾಂಕ್ಗಳಾಗಿ ಮಾಡಿಕೊಂಡು ಕಾಂಗ್ರೆಸ್ ವಂಚನೆ ಮಾಡಿದೆ ಎಂದು ತಾಲೂಕು ದಲಿತ ಸಂಘಟನೆಗಳ ಸಮನ್ವಯ ಹೋರಾಟ ಸಮಿತಿ ಅಧ್ಯಕ್ಷಕೋಡು ಮುನಿಯಪ್ಪ ಮತ್ತು ಸಂಚಾಲಕ ವಿ.ವಿಜಯಕುಮಾರ್ ಆರೋಪಿಸಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರಕಾರ ದಲಿತರಿಗೆ ಹೆಚ್ಚಿನ ಅನುದಾನ ನೀಡಿ ಅಭಿವೃದ್ಧಿಗೆ ಆದ್ಯತೆ ನೀಡಿದೆ. ತಾಲೂಕಿನ ಪ್ರಮುಖ ಕೇಂದ್ರಗಳಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಈ ಕಾರಣಗಳಿಂದಾಗಿ ಸಮಿತಿಯು ಬಿಜೆಪಿ ಬೆಂಬಲಿಸಲು ತೀರ್ಮಾನ ಕೃಗೊಂಡಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

