ಕನಕಪುರ ಕ್ಷೇತ್ರಕ್ಕೆ ಹೆಚ್ಚಿನ ಮಿಲಿಟರಿ ಅಗತ್ಯ
ಕ.ಪ್ರ. ವಾರ್ತೆ , ಕನಕಪುರ , ಏ.28
ಕನಕಪುರ ತಾಲೂಕು ಕಲ್ಲಹಳ್ಳಿ, ಬೂದಿಗುಪ್ಪೆ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಮಾಜಿ ಸಚಿವ, ಜೆಡಿಎಸ್ ಅಭ್ಯರ್ಥಿ ಪಿಜಿಆರ್ ಸಿಂಧ್ಯಾ, ಚುನಾವಣಾ ಪ್ರಚಾರ ನಡೆಸಿದರು. ಪ್ರತಿಯೊಂದು ಗ್ರಾಮದಲ್ಲಿಯೂ ತೆರೆದ ವಾಹನದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದರು. ಜೆಡಿಎಸ್ ಮುಖಂಡರಾದ ಸಿದ್ಧಮರಿಗೌಡ, ಬಿ.ಎಸ್.ಗೌಡ, ತುಂಗಣಿ ಪುಟ್ಟಸ್ವಾಮಿ ಪಾಲ್ಗೊಂಡಿದ್ದರು.
ಈ ವೇಳೆ ಸಿಂಧ್ಯಾ ಮಾತನಾಡುತ್ತಾ, ತಾಲೂಕಿನಲ್ಲಿ ಭಯದ ವಾತಾವರಣ ನೆಲೆಸಿದೆ. ಚುನಾವಣಾ ಆಯೋಗ ಕೈಕಟ್ಟಿ ಕುಳಿತಿದೆ. ಅಧಿಕಾರಿಗಳು ಕಾಂಗ್ರೆಸ್ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಮೇಲೆ ಒತ್ತಡ, ದಬ್ಬಾಳಿಕೆಗಳು ನಡೆಯುತ್ತಿವೆ. ತಾಲೂಕಿನಲ್ಲಿ ನಿಸ್ಪಕ್ಷಪಾತ ಚುನಾವಣೆಯೇ ಅನುಮಾನವಾಗಿದೆ. ಚುನಾವಣಾ ಆಯೋಗ ಕ್ಷೇತ್ರಕ್ಕೆ ಹೆಚ್ಚಿನ ಮಿಲಿಟರಿ ಬಲವನ್ನು ರವಾನಿಸಬೇಕು ಎಂದು ಹೇಳಿದರು. ರಾಜ್ಯದಲ್ಲಿ ಜನಪರ, ರೈತಪರ ಆಡಳಿತ ಮರುಕಳಿಸಲು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಅಧಿಕಾರಕ್ಕೆ ಬರಬೇಕು. ರೈತರ ಸಾಲ ಮನ್ನಾ, ಪಡಿತರ, ವಸತಿಯೋಜನೆ, ಪಿಂಚಣಿ ಯೋಜನೆಗಳ ಸಮರ್ಪಕ ಅನುಷ್ಠಾನ ಜನತಾದಳದಿಂದ ಮಾತ್ರ ಸಾಧ್ಯವಿದ್ದು ಜನರೆಲ್ಲರೂ ಒಗ್ಗೂಡಿ, ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಪಿಜಿಆರ್ ಸಿಂಧ್ಯಾ ವಿನಂತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

