ತತ್ವ, ಮೌಲ್ಯಗಳಿಗೆ ಬಿಜೆಪಿ ತಿಲಾಂಜಲಿ: ಕೃಷ್ಣ ಆರೋಪ
ಹೊಸಕೋಟೆ: ರಾಜ್ಯದ ಭ್ರಷ್ಟ ಬಿಜೆಪಿ ಸರಕಾರವನ್ನು. ತೊಲಗಿಸಿ ಸ್ವಚ್ಛ ಆಡಳಿತ ನೀಡಲು ಕಾಂಗ್ರೆಸ್ಗೆ ಮತ್ತೆ ಅಧಿಕಾರ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಮನವಿ ಮಾಡಿದರು.
ಇಲ್ಲಿನ ಬಸ್ ನಿಲ್ದಾಣದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲೇ ಮೊದಲು ಬಾರಿಗೆ ಮುಖ್ಯಮಂತ್ರಿಯೊಬ್ಬರು ಜೃಲಿಗೆ ಹೋಗಿದ್ದು, ಹಲವು ಸಚಿವರು ಸೆರೆವಾಸ ಅನುಭವಿಸಿದ್ದಾರೆ. ಅಲ್ಪ ಮತ ಇದ್ದರೂ ಸಹ ಆಪರೇಷನ್ ಕಮಲದಿಂದ ಇತರ ಪಕ್ಷಗಳ ಶಾಸಕರನ್ನು ಸೆಳೆದು ತತ್ವ, ಮೌಲ್ಯಗಳಿಗೆ ತಿಲಾಂಜಲಿ ನೀಡಿದ್ದಾರೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
ತಮ್ಮ ಅಧಿಕಾರವಧಿಯಲ್ಲಿ ಬರಗಾಲದ ನಡುವೆಯೂ ಬಿಸಿಯೂಟ, ಯಶಸ್ವಿನಿ ಯೋಜನೆಯಂತಹ ಜನಪರ ಕಾರ್ಯಕ್ರಮಗಳನ್ನು. ಜಾರಿಗೊಳಿಸಲಾಗಿತ್ತು. ಈ ಯೋಜನೆಗಳು ದೇಶಾದ್ಯಂತ ಜನಪ್ರಿಯವಾಗಿವೆ. ಲೋಕಾಯುಕ್ತರನ್ನೂ ಸಹ ನೇಮಕ ಮಾಡಿ ಸ್ವತಂತ್ರ ಕಾರ್ಯನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಇಂದು ಬಿಜೆಪಿ ಸರಕಾರದ ಇಚ್ಛಾಶಕ್ತಿಯ ಕೊರತೆಯಿಂದಾಗಿ ಜನರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್, ಮುಖಂಡರಾದ ಮುನಿಶಾಮಣ್ಣ, ಎ.ಪ್ರಸಾದ್, ಕಮಲಾಕ್ಷಿ, ಕೆಂಚೇಗೌಡ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

