ಬೆಂಗಳೂರು ಗ್ರಾಮಾಂತರ

ಬಚ್ಚೇಗೌಡರ ಗೆಲವು ಖಚಿತ: ಸತೀಶ್‌ಗೌಡ

Published On :

ಸೂಲಿಬೆಲೆ: ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡರ ಗೆಲವು ಖಚಿತ ಎಂದು ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ. ಸತೀಶ್‌ಲ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸೂಲಿಬೆಲೆ ಹೋಬಳಿಯ ಇ.ಮುತ್ಸಂದ್ರ ಗ್ರಾಮದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಹೊಸಕೋಟೆ ಕ್ಷೇತ್ರದಲ್ಲಿ ಸತತ 5 ಬಾರಿ ಬಚ್ಚೇಗೌಡರು ವಿಜಯಶಾಲಿಯಾಗಿದ್ದು, ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳು ಗೆಲವಿಗೆ ಶ್ರೀರಕ್ಷೆಯಾಗಲಿವೆ. ಕ್ಷೇತ್ರದ 5 ಹೋಬಳಿಗಳಲ್ಲಿ ರಸ್ತೆ ಚರಂಡಿ,ಕುಡಿಯುವ ನೀರು ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿಯನ್ನು ಮಾಡುವಲ್ಲಿ ಬಚ್ಚೇಗೌಡರು ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.ಇದೇ ವೇಳೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಹಲವು ಮುಖಂಡರನ್ನು ಹೂ ಹಾರ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಗ್ರಾಪಂ ಮಾಜಿ ಅಧ್ಯಕ್ಷ ಆನಂದಪ್ಪ, ಮುನಿರಾಜ್, ಚಿಕ್ಕಅರಳಿಗೆರೆ ಜಗದೀಶ್ ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.