ಬೆಂಗಳೂರು ಗ್ರಾಮಾಂತರ

ಬಿಜೆಪಿಯಿಂದ ಮಾತ್ರ ಉತ್ತಮ ಆಡಳಿತ: ಮಾಜಿ ಮುಖ್ಯಮಂತ್ರಿ ಸದಾನಂದಗೌಡ

Published On :

ವಿಜಯಪುರ: 50 ವರ್ಷಗಳಷ್ಟು ಕಾಲ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳು ರಾಜ್ಯದಲ್ಲಿ ಅಡಳಿತ ನಡೆಸಿವೆ. ಆದರೆ ಈ 5 ವರ್ಷಗಳಲ್ಲಿ ಭಾರತೀಯ ಜನತಾ ಪಕ್ಷ ಮಾಡಿರುವಷ್ಟು ಅಭಿವೃದ್ಧಿ ಯೋಜನೆಗಳು ಹಾಗೂ ಅನುಷ್ಠಾನಗಳು ಯಾವ ಸರ್ಕಾರದ ಅವಧಿಯಲ್ಲಿಯೂ ನಡೆದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದಗೌಡರು ತಿಳಿಸಿದರು.
ಅವರು ಪಟ್ಟಣದ ಗಾಂಧಿ ಚೌಕದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಚಂದ್ರಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು. ಕಳೆದ ಚುನಾವಣಾ ಪ್ರಣಾಳಿಕೆಯ ಬಹುತೇಕ ಯೋಜನೆಗಳು ಅನುಷ್ಠಾನಗೊಂಡಿವೆ ಎಂದ ಅವರು ಸರ್ಕಾರದಿಂದ ಭಾಗ್ಯಲಕ್ಷ್ಮಿ, ವೃದ್ದಾಪ್ಯ ವೇತನ, ರೈತರ ಸಾಲ ಮನ್ನಾ,ಒಂದು ಲಕ್ಷದವರೆಗೆ ಬಡ್ಡಿ ರಹಿತ ಸಾಲ ನೀಡುವುದು, ಸಂಧ್ಯಾ ಸುರಕ್ಷಾ, ಸೈಕಲ್ ವಿತರಣೆಗಳಂತಹ ಅಭಿವೃದ್ಧಿ  ಕೆಲಸಗಳು ನಡೆದಿವೆ. ಬಿಜೆಪಿಗೆ ಎಲ್ಲರೂ ಬೆಂಬಲ ನೀಡಬೇಕು ಎಂದರು.
ಎಂ.ಎಲ್.ಸಿ. ವೈ.ಎನ್.ನಾರಾಯಸ್ವಾಮಿ ಮಾತನಾಡಿ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳಿಗಿಂತ ಬಿಜೆಪಿ ಕ್ಷೇತ್ರದಲ್ಲಿ ಉತ್ತಮ ಆಡಳಿತವನ್ನು ನೀಡಿದೆ. ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಜನರೇ ಯಾವ ಪಕ್ಷಕ್ಕೆ ಅಧಿಕಾರ ನೀಡಬೇಕು ಎಂಬುದನ್ನು ಅರಿಯಲಿ ಎಂದರು. ಬಿಜೆಪಿ ಅಭ್ಯರ್ಥಿ ಜಿ.ಚಂದ್ರಣ್ಣ,  ಕಾರ್ಯದರ್ಶಿ ಕೆ. ನಾಗೇಶ್, ಜಿಲ್ಲಾ ಕಾರ್ಯದರ್ಶಿ ದೇ.ಸು.ನಾಗರಾಜ್,ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ, ರಾಷ್ಟೀಯ ಪರಿಷತ್ ಸದಸ್ಯ ಎ.ಸಿ.ಗುರುಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.