'ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ'
ಕ.ಪ್ರ.ವಾರ್ತೆ ಹೊಸಕೋಟೆ ಏ.29-
ತಾಲೂಕಿನಲ್ಲಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಕಾರ್ಯನಿರ್ವಹಿಸಿರುವುದೇ ತಮಗೆ ಶ್ರೀರಕ್ಷೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಅವರು ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು. ತಾಲೂಕಿನ 15,383 ಎಪಿಎಲ್, 45973 ಬಿಪಿಎಲ್, 3505 ಅಂತ್ಯೋದಯ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 44.4 ಕೋಟಿ ರು.ವೆಚ್ಚದಲ್ಲಿ 599 ಕೊಳವೆ ಬಾವಿಗಳನ್ನು ಕೊರೆದು 215 ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದು 57 ಓವರ್ ಟ್ಯಾಂಕ್ ನಿರ್ಮಿಸಲಾಗಿದೆ. ರೇಷ್ಮೆ ಕೃಷಿ ಉತ್ತೇಜಿಸಲು 4008 ಫಲಾನುಭವಿಗಳಿಗೆ 5.80 ಕೋಟಿ ರು.ಗಳ ಸಹಾಯಧನ ನೀಡಲಾಗಿದೆ.
ಮುಖ್ಯಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿ 101 ಕಿ.ಮೀ.ಗಳ ಸಂಪರ್ಕ ರಸ್ತೆಗಳನ್ನು 47.70 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಎಲೆಮಲ್ಲಪ್ಪಶೆಟ್ಟಿ ಕೆರೆ ನೀರನ್ನು ದೊಡ್ಡಕೆರೆಗೆ ಸಂಪರ್ಕಿಸಲು 4 ಕೋಟಿ ರು., ದೇವಶೆಟ್ಟಿಹಳ್ಳಿ ಬಳಿ ಇಂಗುಕೆರೆ ನಿರ್ಮಾಣಕ್ಕೆ 71 ಲಕ್ಷ ರು., ಬ್ಯಾಲಹಳ್ಳಿ ಏತ ನೀರಾವರಿ ಯೋಜನೆಗೆ 1.07 ಕೋಟ್ಟಿ ರು. ವೆಚ್ಚ ಮಾಡಲಾಗುತ್ತಿದ್ದು, 360 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

