ಬೆಂಗಳೂರು ಗ್ರಾಮಾಂತರ

ಈ ಭಾರಿ ಬದಲಾವಣೆ ಅವಕಾಶ: ಡಿ.ಆರ್. ನಾರಾಯಣಸ್ವಾಮಿ

Published On :

ವಿಜಯಪುರ: ದೇವನಹಳ್ಳಿ ಮೀಸಲು ಕ್ಷೇತ್ರದ ಬಿ.ಎಸ್.ಆರ್ ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ನಾರಾಯಣಸ್ವಾಮಿ  ಹಲವಾರು ಕಾರ್ಯಕರ್ತರೊಂದಿಗೆ ಮನೆಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ಸಂಧರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಈ ಬಾರಿ ಕ್ಷೇತ್ರದಲ್ಲಿ ಜಯಭೇರಿ ಸಾಧಿಸುವುದು ಖಚಿತ. ಕ್ಷೇತ್ರದಲ್ಲಿ 270 ಹಳ್ಳಿಗಳಿದ್ದು ಎಲ್ಲಾ ಕಡೆ ಜನ ಸಾಮಾನ್ಯರು ಬೆಂಬಲ ಸೂಚಿಸುತ್ತಿದ್ದಾರೆ ಎಂದರು. ಜೆಡಿಎಸ್ ಮತ್ತು ಕಾಂಗ್ರೆಸ್‌ಗಳಿಗೆ ಆಶೀರ್ವದಿಸಿದ ಮತದಾರ ಈ ಬಾರಿ ಬಿಎಸ್‌ಆರ್ ಕಾಂಗ್ರೆಸ್‌ಗೆ ಆಶೀರ್ವದಿಸಲಿದ್ದಾರೆ ಎಂದು ತಿಳಿಸಿದರು. ಬೆಂ.ಗ್ರಾ.ಸಂಘಟನಾ ಕಾರ್ಯದರ್ಶಿ  ನವೀನ್ ಕುಮಾರ್, ಬಿಎಸ್‌ಆರ್ ತಾಲೂಕು ಮುಖಂಡ ಕೆ.ಎಂ.ರಾಜಣ್ಣ, ಜಿಲ್ಲಾ ಉಪಾಧ್ಯಕ್ಷ ದೇವರಾಜ್, ತಾಲೂಕು ಎಸ್ಸಿ- ಎಸ್ಟಿ ಘಟಕದ ಸುರೇಶ್, ಉಪಾಧ್ಯಕ್ಷ ಸತೀಶ್, ಲಕ್ಷ್ಮಿ ನಾರಾಯಣ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.