ಬೆಂಗಳೂರು ಗ್ರಾಮಾಂತರ

ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ: ತೀವ್ರ ಗಾಯ

Published On :

ಮಾಗಡಿ: ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ  ಘರ್ಷಣೆ ನಡೆದಿದೆ.
 ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಶಿವರುದ್ರಪ್ಪ ಮತ್ತು ಮಕ್ಕಳು ಸೇರಿ, ಕೆ.ಸಿ. ಬೃಂಗೇಶ್, ಆತನ ತಂದೆ, ಚಿಕ್ಕಪ್ಪನ  ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಧಮಿಕಿ ಹಾಕಿರುವ ಘಟನೆಯೂ ನಡೆದಿದೆ.
 ತಾಲೂಕಿನ ಗುಡೇಮಾರನಹಳ್ಳಿ ಅಂಗಡಿಯೊಂದರಲ್ಲಿ ಕುಳಿತಿದ್ದಾಗ ಈ ಘಟನೆ ನಡೆದಿದ್ದು, ಬೃಂಗೇಶ್, ಆತನ ತಂದೆ, ಚಿಕ್ಕಪ್ಪ ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದ ಇವರೆಲ್ಲ ಹತ್ತಿರ ಸಂಬಂಧಿಗಳು.   ತೀವ್ರವಾಗಿ ಗಾಯಗೊಂಡಿರುವ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬೃಂಗೇಶ್, ತಂದೆ ಪರಮಶಿವಯ್ಯ ಹಾಗೂ ಚಿಕ್ಕಪ್ಪ ಮಹದೇವಯ್ಯ ಅವರು ಕುದೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.
   ಈ ಸಂಬಂಧ ಕುದೂರು ಪಿಎಸ್‌ಐ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.