ಬಿಜೆಪಿ ಮುಖಂಡ ಎಸ್ಎಲ್ಎನ್ ಅಶ್ವತ್ಥನಾರಾಯಣ್ ಮಧ್ಯ ರಾತ್ರಿ ಕಾಂಗ್ರೆಸ್ಗೆ ಸೇರ್ಪಡೆ
ದೇವನಹಳ್ಳಿ: ದೇವನಹಳ್ಳಿಯ ಬಿಜೆಪಿ ಮುಖಂಡ ಹಾಗೂ ಬಯಪ ಮಾಜಿ ಅಧ್ಯಕ್ಷ ಎಸ್ಎಲ್ಎನ್ ಅಶ್ವತ್ಥನಾರಾಯಣ್ ಅವರು ಭಾನುವಾರ ಮಧ್ಯರಾತ್ರಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾದರು.
ಕಳೆದ ಮೂರು ದಿನಗಳ ಹಿಂದೆಯೇ ಕೆಪಿಸಿಸಿ ಅಧ್ಯಕ್ಷರು ದೇವನಹಳ್ಳಿಗೆ ಎಸ್ಎಲ್ಎನ್ ಅಶ್ವತ್ಥನಾರಾಯಣ್ ಅವರ ಮನೆಗೆ ಬರಬೇಕಾಗಿತ್ತು. ಸಮಯವಿಲ್ಲದ ಕಾರಣದಿಂದಾಗಿ ಭಾನುವಾರ ರಾತ್ರಿ ಆಗಮಿಸಿ ಅಶ್ವತ್ಥನಾರಾಯಣ್ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ಗೆ ಸೇರ್ಪಡೆ ಮಾಡಿಕೊಂಡರು.
ಅಶ್ವತ್ಥನಾರಾಯಣ್ ಅವರು 2009 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಎಂ.ವೀರಪ್ಪಮೊಯ್ಲಿ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರೂ ಬಿಜೆಪಿಯಲ್ಲೇ ಗುರುತಿಸಿಕೊಂಡು ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಬೆಂಬಲಿಗರಾದ ಎಸ್.ಜಿ. ನಾರಾಯಣಸ್ವಾಮಿ ಅವರಿಗೆ ಟಿಕೆಟ್ ನೀಡದೇ ಬಿಜೆಪಿ ಮುಖಂಡರು ಸ್ಥಳೀಯ ಕಾರ್ಯಕರ್ತರನ್ನು ಗಣನೆಗೆ ತೆಗೆದುಕೊಳ್ಳದೆ ಜೆಡಿಎಸ್ನಿಂದ ಬಿಜೆಪಿಗೆ ವಲಸೆ ಬಂದ ಜಿ.ಚಂದ್ರಣ್ಣರವರಿಗೆ ಟಿಕೆಟ್ ನೀಡಿರುವ ಕಾರಣದಿಂದಾಗಿ ತಾವು ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಸ್.ಜಿ. ನಾರಾಯಣಸ್ವಾಮಿ, ದ್ಯಾವರಹಳ್ಳಿ ಶಾಂತಕುಮಾರ್ ಕಾರ್ಯಕರ್ತರು ಕಾಂಗ್ರೆಸ್ಗೆ ಸೇರ್ಪಡೆಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

