ವಿಧಾನಸಭಾ ಚುನಾವಣೆ: ಕನ್ನಡಪಕ್ಷ ತಟಸ್ಥ
ದೊಡ್ಡಬಳ್ಳಾಪುರ: ಈ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸದೆ ಇರಲು ಕನ್ನಡ ಪಕ್ಷ ತೀರ್ಮಾನಿಸಿದೆ. ಅಲ್ಲದೆ ಚುನಾವಣಾ ಅಖಾಡದಲ್ಲಿ ತಟಸ್ಥ ನಿಲುವು ಹೊಂದಿರುವುವಾಗಿ ಪಕ್ಷದ ಅಧ್ಯಕ್ಷ ಸಂಜೀವನಾಯಕ್ ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಯಾವ ವ್ಯಕ್ತಿ ಯಾವಾಗ ಯಾವ ಪಕ್ಷದಲ್ಲಿರುತ್ತಾನೆ, ಯಾವ ಪಕ್ಷಕ್ಕೆ ಹಾರುತ್ತಾನೆ ಎಂಬುದೇ ತಿಳಿಯದಾಗಿದೆ. ಪಕ್ಷಾಂತರ ಮತ್ತು ಅಧಿಕಾರ ದುರ್ಬಳಕೆಯ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ.
ಈ ಬಾರಿ ಬಿಜೆಪಿ ಅಭ್ಯರ್ಥಿ ಜೆ.ನರಸಿಂಹಸ್ವಾಮಿ ಮತ್ತು ಜೆಡಿಎಸ್ ಬಂಡಾಯದ ಪಕ್ಷೇತರ ಅಭ್ಯರ್ಥಿ ಬಿ.ಮುನೇಗೌಡ ಕನ್ನಡಪಕ್ಷದ ಬೆಂಬಲ ಕೋರಿದ್ದಾರೆ. ಆದರೆ ಕಾರ್ಯಕರ್ತರಲ್ಲಿ ಈ ಬಗ್ಗೆ ಗೊಂದಲದ ಅಭಿಪ್ರಾಯಗಳಿದ್ದು, ಪಕ್ಷ ತಟಸ್ಥವಾಗಿ ಉಳಿಯಲು ನಿರ್ಧರಿಸಿದೆ ಎಂದು ವಿವರಿಸಿದರು. ಕಳೆದ ನಗರಸಭಾ ಚುನಾವಣೆಯಲ್ಲಿ 3 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಕನ್ನಡಪಕ್ಷದ ಇಬ್ಬರು ಅಭ್ಯರ್ಥಿಗಳು ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ತನ್ನದೇ ಆದ ಮಾನ್ಯತೆ ಹೊಂದಿರುವ ಕನ್ನಡಪಕ್ಷ ದಲಿತರು, ಕನ್ನಡಪರ ಇಚ್ಛಾಶಕ್ತಿ, ನೇಕಾರರು, ದುಡಿಯುವ ವರ್ಗ, ರೈತ, ಕಾರ್ಮಿಕ ಹೋರಾಟಗಳ ಮೂಲಕ ಗುರುತಿಸಿಕೊಂಡಿದೆ. ಈ ಬಾರಿ ಚುನಾವಣೆಯಲ್ಲಿ ಬಯಲು ಸೀಮೆಗೆ ಶಾಶ್ವತ ನೀರಾವರಿ ಎಲ್ಲರ ಮೊದಲ ಆದ್ಯತೆಯಾಗಬೇಕು ಎಂದು ಒತ್ತಾಯಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಡಿ.ಪಿ. ಆಂಜನೇಯ, ಮುಖಂಡರಾದ ಕೇಬಲ್ ಮುನಿರಾಜು, ವೆಂಕಟೇಶ್ ಮತ್ತಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

