ಬೆಂಗಳೂರು ಗ್ರಾಮಾಂತರ

ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ: ಬಚ್ಚೇಗೌಡ

Published On :

ಕ.ಪ್ರ.ವಾರ್ತೆ   ಹೊಸಕೋಟೆ   ಏ.29
 ತಾಲೂಕಿನಲ್ಲಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಕಾರ್ಯನಿರ್ವಹಿಸಿರುವುದೇ ತಮಗೆ ಶ್ರೀರಕ್ಷೆಯಾಗಿದೆ ಎಂದು ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಅವರು ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು. ತಾಲೂಕಿನ  15,383 ಎಪಿಎಲ್, 45973 ಬಿಪಿಎಲ್, 3505 ಅಂತ್ಯೋದಯ ಪಡಿತರ ಚೀಟಿಗಳನ್ನು ವಿತರಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು 44.4 ಕೋಟಿ ರು.ವೆಚ್ಚದಲ್ಲಿ 599 ಕೊಳವೆ ಬಾವಿಗಳನ್ನು ಕೊರೆದು 215 ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದು 57 ಓವರ್ ಟ್ಯಾಂಕ್ ನಿರ್ಮಿಸಲಾಗಿದೆ. ರೇಷ್ಮೆ ಕೃಷಿ ಉತ್ತೇಜಿಸಲು 4008 ಫಲಾನುಭವಿಗಳಿಗೆ 5.80 ಕೋಟಿ ರು.ಗಳ ಸಹಾಯಧನ ನೀಡಲಾಗಿದೆ. ಮುಖ್ಯಮಂತ್ರಿಗಳ ಗ್ರಾಮ ಸಡಕ್ ಯೋಜನೆಯಡಿ 101 ಕಿ.ಮೀ.ಗಳ ಸಂಪರ್ಕ ರಸ್ತೆಗಳನ್ನು 47.70 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿದ್ಯುತ್ ಸಮಸ್ಯ ಪರಿಹರಿಸಲು ನಿರ್ವಹಣಾ ವೆಚ್ಚ ಸೇರಿದಂತೆ ಒಟ್ಟು 272.28 ಕೋಟಿ ರು.ಗಳ ವೆಚ್ಚದಲ್ಲಿ 1012 ಟ್ರಾನ್ಸ್ ಫಾರ್ಮರ್‌ಗಳನ್ನು ಅಳವಡಿಸಿದ್ದು, ನಿರಂತರ ಜ್ಯೋತಿ ಯೋಜನೆಗೆ 19.16 ಕೋಟಿ ರೂ.ವೆಚ್ಚ ಮಾಡಲಾಗಿದೆ. ಮಳೆಯ ತೀವ್ರ ಅಭಾವದಿಂದ ಅಂತರ್ಜಲ ಮಟ್ಟ ಕುಸಿತಗೊಂಡು ಅಭಿವೃದ್ಧಿಪಡಿಸುವ ಉದ್ದೇಶದಿಂದ ಎಲೆಮಲ್ಲಪ್ಪಶೆಟ್ಟಿ ಕೆರೆ ನೀರನ್ನು ದೊಡ್ಡಕೆರೆಗೆ ಸಂಪರ್ಕಿಸಲು 4 ಕೋಟಿ ರು., ದೇವಶೆಟ್ಟಿಹಳ್ಳಿ ಬಳಿ ಇಂಗುಕೆರೆ ನಿರ್ಮಾಣಕ್ಕೆ 71 ಲಕ್ಷ ರು., ಬ್ಯಾಲಹಳ್ಳಿ ಏತ ನೀರಾವರಿ ಯೋಜನೆಗೆ 1.07 ಕೋಟ್ಟಿ ರು. ವೆಚ್ಚ ಮಾಡಲಾಗುತ್ತಿದ್ದು, 360 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಿದೆ.
 ಸರಕಾರದ ನಾನಾ ಜಮಿನೆಗಳಿಗೆ 24349 ರೃತರು 11.37 ಕೋಟಿ ರು.ಗಳಷ್ಟು ಸಹಾಯಧನ ಪಡೆದಿದ್ದಾರೆ. ವಿಭಜಿತ ಬೆಂಗಳೂರು ವಿವಿಗೆ ನಂದಗುಡಿ ಹೋಬಳಿಯಲ್ಲಿ ಡಿ.ವಿ.ಜಿ ಜ್ಞಾನವಾಹಿನಿ ವಿಶ್ವವಿದ್ಯಾಲಯವನ್ನು 500 ಕೋಟಿ ರು.ಗಳ ವೆಚ್ಚದಲ್ಲಿ ಸ್ಥಾಪಿಸಲು ಕ್ರಮ ಕೃಗೊಳ್ಳಲಾಗಿದೆ.
ತಾಲೂಕಿನ ಪ್ರತಿ ಗ್ರಾಮಕ್ಕೂ ಸಹ ಸಾರಿಗೆ ಸೌಲಭ್ಯ ಒದಗಿಸಿ ಪಟ್ಟಣದಲ್ಲಿ ಬಿಎಂಟಿಸಿ ಬಸ್ ಡಿಪೋ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ತಮ್ಮ ಸಾಧನೆಯನ್ನು ಸಹಿಸದೆ ಮತದಾರರಲ್ಲಿ ಗೊಂದಲ ನಿರ್ಮಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮತದಾರರಿಗೆ ವಿದ್ಯುನ್ಮಾನ ಯಂತ್ರದ ಮೂಲಕ ಮತ ಚಲಾಯಿಸುವ ಬಗ್ಗೆ ತಿಳಿವಳಿಕೆ ಸಹ ನೀಡಿದರು. ತಾಲೂಕು ಬಿಜೆಪಿ ಅಧ್ಯಕ್ಷ ಸಿ.ಮುನಿಯಪ್ಪ, ರೇಷ್ಮೆ ಬೆಳೆಗಾರರ ಸಹಕಾರ ಬ್ಯಾಂಕ್ ಅಧ್ಯಕ್ಷ ಕೆ. ಕೃಷ್ಣಮೂರ್ತಿ ಮುಂತಾದವರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.