ಬೆಂಗಳೂರು ಗ್ರಾಮಾಂತರ

ಬಿಜೆಪಿ ಸುಭದ್ರ ಸರ್ಕಾರ ಕೊಟ್ಟೀತೇ?

Published On :

ದೊಡ್ಡಬಳ್ಳಾಪುರ: ಕಾಂಗ್ರೆಸ್ ಮಾತ್ರ ಈ ದೇಶದಲ್ಲಿ ಸುಭದ್ರ ಸರ್ಕಾರ ನೀಡಲು ಸಾಧ್ಯ. ನಾಯಕತ್ವವೇ ಭದ್ರವಾಗಿಲ್ಲದ ಬಿಜೆಪಿಗೆ ಸುಭದ್ರ ಸರ್ಕಾರ ನೀಡಲು ಹೇಗೆ ತಾನೆ ಸಾಧ್ಯ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಚಿರಂಜೀವಿ ಪ್ರಶ್ನಿಸಿದರು.
ದೊಡ್ಡಬಳ್ಳಾಪುರದಲ್ಲಿ ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ ಪರ ಚುನಾವಣಾ ಪ್ರಚಾರ, ರೋಡ್ ಶೋ ನಡೆಸಿ ಮಾತನಾಡಿ, ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಕಳೆದೈದು ವರ್ಷಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಸಗಿದೆ. ಅಧಿಕಾರದಲ್ಲಿದ್ದ ಮುಖ್ಯಮಂತ್ರಿಯೊಬ್ಬರು ಜೈಲಿಗೆ ಹೋಗಿ ಬಂದ ಕುಖ್ಯಾತಿಯೂ ಈ ಸರ್ಕಾರಕ್ಕಿದೆ.
ನಾವು ಜನಪರ ಎಂದು ಹೇಳಿಕೊಳ್ಳುವ ಬಿಜೆಪಿ ಕೇವಲ ಆಂತರಿಕ ಕಚ್ಚಾಟ ಮತ್ತು ಕುರ್ಚಿ ಕಾದಾಟದಲ್ಲಿಯೇ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡದ್ದು ಎಲ್ಲರಿಗೂ ಗೊತ್ತಿದೆ. ದೇಶದಲ್ಲಿ ಕಾಂಗ್ರೆಸ್ ಮಾತ್ರ ಎಲ್ಲ ವರ್ಗದ ಜನರ ಹಿತಾಸಕ್ತಿಗಳಿಗೆ ಮಾನ್ಯತೆ ನೀಡಬಲ್ಲದು ಎಂದು ಹೇಳಿದರು.
ರಾಜ್ಯವನ್ನು ದಿವಾಳಿ ಮಾಡಿದ ಕೀರ್ತಿ ಎಚ್ಡಿಕೆಗೆ: ಜನಪರ ಆಡಳಿತ ನೀಡುತ್ತಿದ್ದ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ರಾತ್ರೋರಾತ್ರಿ ಬೀಳಿಸಿ ಅಧಿಕಾರ ದಾಹದಿಂದ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡು ರಾಜ್ಯ ರಾಜಕಾರಣವನ್ನು ಅಧೋಗತಿಗೆ ತಂದು ನಿಲ್ಲಿಸಿದ ಕೀರ್ತಿ ಕುಮಾರಸ್ವಾಮಿಗೆ ಸಲ್ಲುತ್ತದೆ ಎಂದು ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯ್ಲಿ ಹೇಳಿದರು.
ರಾಜ್ಯ ಕಂಡು ಕೇಳರಿಯದ ರೀತಿಯಲ್ಲಿ ಆಡಳಿತ ಯಂತ್ರವನ್ನು ದಿವಾಳಿ ಎಬ್ಬಿಸಿದ್ದು ಬಿಜೆಪಿ ಸಾಧನೆ. ಹೀಗಾಗಿ ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳನ್ನು ದೂರವಿಟ್ಟು ಜನ ಕಾಂಗ್ರೆಸ್ ಅನ್ನು ಬೆಂಬಲಿಸಲಿದ್ದಾರೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.