ಬೆಂಗಳೂರು ಗ್ರಾಮಾಂತರ

ಪ್ರಗತಿಗೆ ಯುವಕರು ಮುಖ್ಯ ಪಾತ್ರ ವಹಿಸಲಿ: ಚಿರಂಜೀವಿ

Published On :

ಹೊಸಕೋಟೆ: ದೇಶದ ಪ್ರಗತಿಗೆ  ಯುವಕರು ಮುಖ್ಯ ಪಾತ್ರ ವಹಿಸಬೇಕಾಗಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಹಾಗೂ ಖ್ಯಾತ ತೆಲುಗು ಚಿತ್ರ ನಟ ಚಿರಂಜೀವಿ ಹೇಳಿದರು. ಹೊಸಕೋಟೆ ಪಟ್ಟಣದ  ಕಾಂಗ್ರೆಸ್ ಅಭ್ಯರ್ಥಿ ಎನ್.ನಾಗರಾಜ್ ಪರ  ಚುನಾವಣಾ ಪ್ರಚಾರ ನಡೆಸಿದ ಅವರು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರಾಜ್ಯ ತಂತ್ರಜ್ಞಾನ ಕ್ಷೇತ್ರದಲ್ಲಿ ಮೊದಲ ಸ್ಥಾನ ಪಡೆದಿತ್ತು. ನಂತರ ಬಂದ ಬಿಜೆಪಿ ಸರಕಾರ ಕರ್ನಾಟಕ ರಾಜ್ಯವನ್ನು ಭ್ರಷ್ಟಾಚಾರದಲ್ಲಿ ಮೊದಲ ಸ್ಥಾನ ಗಳಿಸುವಂತೆ ಮಾಡಿದೆ ಎಂದರು. ಕರ್ನಾಟಕದ ಜನತೆ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸೋನಿಯ ಗಾಂಧಿ ಅವರ ಮೇಲಿನ ಅಭಿಮಾನ ನಮ್ಮಂತಹವರನ್ನು ಕಾಂಗ್ರೆಸ್‌ಗೆ ಕರೆ ತಂದಿದೆ. ವಿಶ್ವದಲ್ಲಿ ಭಾರತ ಮುಂಚೂಣಿಯಲ್ಲಿ ನಿಲ್ಲುವಂತೆ ಮಾಡಲು ನಾವೆಲ್ಲರೂ ರಾಹುಲ್ ಗಾಂಧಿ ಅವರ  ಕೈ  ಬಲಪಡಿಸಬೇಕಿದೆ. ರಾಜ್ಯ ಮತ್ತು ದೇಶದ ಸರ್ವತೋಮುಖಿ ಅಭಿವೃದ್ಧಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.